ಬೆಂಗಳೂರು: ಕಾಂಗ್ರೆಸ್ನಲ್ಲಿ ಪಕ್ಷಕ್ಕೆ ಬದ್ಧರಾಗಿ ಯಾರೂ ಇಲ್ಲ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಗಂಭೀರ ಆರೋಪ ಮಾಡಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಪಕ್ಷಕ್ಕೆ ದ್ರೋಹ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷಕ್ಕೆ ನಿಷ್ಠೆ ಇಲ್ಲದೆ ಕೆಲಸ ಮಾಡ್ತಿದ್ದಾರೆ. ಕಾಂಗ್ರೆಸ್ನಲ್ಲಿ ಪಕ್ಷಕ್ಕೆ ಬದ್ಧರಾಗಿ ಯಾರೂ ಇಲ್ಲ ಎಂದು ಆರೋಪಿಸಿದ್ದಾರೆ.
2008, 2018ರಲ್ಲಿ ಯಾರು ಯಾರನ್ನ ಕಳಿಸಿದ್ದು ಎಂದು ಎಲ್ಲರಿಗೂ ಗೊತ್ತಿದೆ. ಮೈತ್ರಿ ಸರ್ಕಾರ ಕಾಪಾಡುವುದಾಗಿ ಹೇಳಿ, ಏನು ಮಾಡಿದ್ರು?. ನಿಜಕ್ಕೂ ಸರ್ಕಾರ ಪತನ ಮಾಡಿದವರು ಡಿ ಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ. ಇದು ಲೋಕಕ್ಕೆ ಗೊತ್ತಿರುವ ಸತ್ಯ. ತಂತ್ರ, ಕುತಂತ್ರ ಎಲ್ಲಾ ಜನರಿಗೆ ಗೊತ್ತಿದೆ ಎಂದು ಹೇಳಿದರು.