ಕರ್ನಾಟಕ

karnataka

ಸೆ.19ರಂದು ದೇಶದ ಮೊದಲ ಇ-ಲೋಕ ಅದಾಲತ್ : ನ್ಯಾ. ಅರವಿಂದ್ ಕುಮಾರ್

ಅಪಘಾತ ಪ್ರಕರಣಗಳಲ್ಲಿ 8-10 ವರ್ಷಗಳ ಕಾಲ ಪರಿಹಾರ ಸಿಗದ ಹಾಗೂ ಸಂತ್ರಸ್ತರಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ಲೋಕ ಅದಾಲತ್ ಮೂಲಕ ಅಪಘಾತ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಬಹುದು. ಹಣಕಾಸು, ಕೌಟುಂಬಿಕ, ಸಿವಿಲ್ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದೇವೆ ಎಂದು ಹೈಕೋರ್ಟ್​ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ತಿಳಿಸಿದರು.

By

Published : Aug 29, 2020, 12:41 AM IST

Published : Aug 29, 2020, 12:41 AM IST

E-loka adalat starts from sep 19
ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್

ಬೆಂಗಳೂರು: ದೇಶದಲ್ಲಿ ಇದೇ ಮೊದಲ ಬಾರಿಗೆ ಇ-ಲೋಕ ಅದಾಲತ್​ನ್ನು ಸೆ. 19ರಂದು ನಡೆಸಲಾಗುವುದು ಎಂದು ಹೈಕೋರ್ಟ್​ನ ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್ ತಿಳಿಸಿದರು.

ಹಿರಿಯ ನ್ಯಾಯಮೂರ್ತಿ ಅರವಿಂದ್ ಕುಮಾರ್

ಈ ಬಗ್ಗೆ ಮಾತನಾಡಿದ ಅವರು, ಕೋವಿಡ್ ಪರಿಸ್ಥಿತಿ ಇರುವ ಹಿನ್ನೆಲೆಯಲ್ಲಿ ಇ-ಲೋಕ ಅದಾಲತ್ ಮೂಲಕ ಸಂಧಾನ ಪ್ರಕ್ರಿಯೆ ನಡೆಸಲು ತೀರ್ಮಾನಿಸಿದ್ದೇವೆ. ಈ ಸಂಬಂಧ ಈಗಾಗಲೇ ನಾಲ್ಕು ಸಭೆಗಳನ್ನು ನಡೆಸಿದ್ದೇವೆ. ವಕೀಲರ ಜೊತೆ ಹಾಗೂ ಇನ್ಸ್ಯೂರೆನ್ಸ್ ಕಂಪನಿಗಳ ಹಿರಿಯ ಅಧಿಕಾರಿಗಳ ಜೊತೆಯಲ್ಲೂ ಸಭೆ ನಡೆಸಿದ್ದೇವೆ ಎಂದು ತಿಳಿಸಿದರು.

ಅಪಘಾತ ಪ್ರಕರಣಗಳಲ್ಲಿ 8-10 ವರ್ಷಗಳ ಕಾಲ ಪರಿಹಾರ ಸಿಗದ ಹಾಗೂ ಸಂತ್ರಸ್ತರಿಗೆ ಸಮಸ್ಯೆಯಾಗಲಿದೆ. ಆದ್ದರಿಂದ ಲೋಕ ಅದಾಲತ್ ಮೂಲಕ ಅಪಘಾತ ಪ್ರಕರಣಗಳನ್ನು ರಾಜಿ ಮೂಲಕ ಇತ್ಯರ್ಥಪಡಿಸಬಹುದು. ಹಣಕಾಸು, ಕೌಟುಂಬಿಕ, ಸಿವಿಲ್ ಹಾಗೂ ವ್ಯಾಜ್ಯಪೂರ್ವ ಪ್ರಕರಣಗಳನ್ನು ಇತ್ಯರ್ಥಪಡಿಸಲು ಮುಂದಾಗಿದ್ದೇವೆ ಎಂದರು.

ಇದರಿಂದ ಸದ್ಯ ಕೋವಿಡ್-19 ಪರಿಸ್ಥಿತಿಯಲ್ಲಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರಿಗೂ ಅನುಕೂಲವಾಗಲಿದೆ. ಅಲ್ಲದೇ, ಕೋವಿಡ್ ಪರಿಸ್ಥಿತಿಯಲ್ಲಿ ಕಕ್ಷೀದಾರರು ನ್ಯಾಯಾಲಯಗಳಿಗೆ ಬರುವ ಅಗತ್ಯವಿಲ್ಲ. ಬದಲಿಗೆ ಮನೆಯಲ್ಲಿದ್ದು, ಅಥವಾ ತಮ್ಮ ವಕೀಲರ ಕಚೇರಿಗಳ ಮೂಲಕವೇ ಆನ್​ಲೈನ್ ಕಲಾಪದಲ್ಲಿ ಭಾಗಿಯಾಗಿ ವ್ಯಾಜ್ಯ ಬಗೆಹರಿಸಿಕೊಳ್ಳಬಹುದು. ಪ್ರಕರಣವನ್ನು ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಇಚ್ಚಿಸುವ ಕಕ್ಷೀದಾರರು ಈ ಸೌಲಭ್ಯವನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದು ಕೋರಿದರು.

ನ್ಯಾ. ಅಲೋಕ್ ಆರಾಧೆ ಮಾತನಾಡಿ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಮೂಲ ಉದ್ದೇಶ ಸರ್ವರಿಗೂ ನ್ಯಾಯ ಸಿಗಬೇಕು. ಜಾತಿ, ಧರ್ಮ, ವರ್ಗ, ಆರ್ಥಿಕ ಸ್ಥಿತಿ ಯಾವುದೇ ಇದ್ದರೂ ಜನತಾ ನ್ಯಾಯಾಲಯದಲ್ಲಿ ಎಲ್ಲರಿಗೂ ಸಮಾನ ಅವಕಾಶ ಸಿಗಬೇಕು ಎಂಬುದೇ ಆಗಿದೆ. ಈ ಹಿನ್ನೆಲೆಯಲ್ಲಿ ತ್ವರಿತವಾಗಿ ಪ್ರಕರಣಗಳನ್ನು ಇತ್ಯರ್ಥಪಡಿಸಲು ಜನತಾ ನ್ಯಾಯಾಲಯಗಳಲ್ಲಿ ಸಂಧಾನ ನಡೆಸಲು ಮುಂದಾಗಿದ್ದು, ಕಕ್ಷೀದಾರರು ಈ ಸೌಲಭ್ಯ ಬಳಸಿಕೊಳ್ಳುವುದು ಹೆಚ್ಚು ಉಪಯುಕ್ತ ಎಂದು ಹೇಳಿದರು.

ABOUT THE AUTHOR

...view details