ಬೆಂಗಳೂರು: ಬೆಳ್ಳಂಬೆಳಗ್ಗೆ ನಗರದ ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್ ನೀಡಿದೆ. ತೆರಿಗೆ ವಂಚನೆ ಆರೋಪದ ಹಿನ್ನೆಲೆ ಚಿನ್ನದ ವ್ಯಾಪಾರಿಗಳ ಅಂಗಡಿಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ. ಆದಾಯ ತೆರಿಗೆ ವಂಚನೆ ಹಿನ್ನೆಲೆ ನಗರದ ಸುಮಾರು 25ಕ್ಕು ಹೆಚ್ಚು ಜ್ಯುವೆಲ್ಲರಿ ಶಾಪ್ಗಳಿಗೆ ಸಂಬಂಧಿಸಿದಂತೆ ಈ ದಾಳಿ ನಡೆದಿದ್ದು, ಜಯನಗರ, ಯಶವಂತಪುರ, ಬಸವನಗುಡಿ, ಚಿಕ್ಕಪೇಟೆ ಸೇರಿದಂತೆ ಹಲವು ಸ್ಥಳಗಳಲ್ಲಿ ಅಧಿಕಾರಿಗಳು ಶೋಧ ಮುಂದುವರಿಸಿದ್ದಾರೆ. ಅಷ್ಟೇ ಅಲ್ಲ ಜ್ಯುವೆಲ್ಲರಿ ಶಾಪ್ಗಳ ಮಾಲೀಕರ ಮನೆ ಮೇಲೆಯೂ ದಾಳಿ ನಡೆಸಿರುವ ಅಧಿಕಾರಿಗಳು ಶೋಧ ಕೈಗೊಂಡಿದ್ದಾರೆ.
ಓದಿ:ಇಂದಿನಿಂದ ಸಂಸತ್ತಿನ ಬಜೆಟ್ ಅಧಿವೇಶನ: ರಾಷ್ಟ್ರಪತಿ ಭಾಷಣ, ಆರ್ಥಿಕ ಸಮೀಕ್ಷೆ ವರದಿ ಮಂಡನೆ
300 ಅಧಿಕಾರಿಗಳಿಂದ ಕಾರ್ಯಾಚರಣೆ:ಹಲವು ವರ್ಷಗಳಿಂದ ರಾಜಧಾನಿಯಲ್ಲಿ ಚಿನ್ನದ ಅಂಗಡಿ ಇಟ್ಟು ಬಿಸಿನೆಸ್ ಮಾಡುತ್ತಿದ್ದ ಜ್ಯೂವೆಲ್ಲರಿ ಶಾಪ್ ಹಾಗೂ ಮಾಲೀಕರ ಮನೆಗಳ ಮೇಲೆ ಇಂದು ಬೆಳಗ್ಗೆ ದಾಳಿ ನಡೆಸಿದ್ದಾರೆ. ತಪಾಸಣೆ ವೇಳೆ ಮಹತ್ವದ ದಾಖಲಾತಿ ವಶಕ್ಕೆ ಪಡೆದುಕೊಂಡಿದ್ದಾರೆ. 300ಕ್ಕೂ ಹೆಚ್ಚು ಐಟಿ ಅಧಿಕಾರಿಗಳಳು ನಗರದ ಸುಮಾರು 25 ಕಡೆಗಳಲ್ಲಿ ದಾಳಿ ನಡೆಸಿ ಶೋಧಕಾರ್ಯ ನಡೆಸುತ್ತಿದ್ದಾರೆ.
ಮುಂಜಾಗ್ರತ ಕ್ರಮವಾಗಿ ಭದ್ರತೆಗಾಗಿ ಐಟಿ ಅಧಿಕಾರಿಗಳು ಸಿಎಆರ್ ಸಿಬ್ಬಂದಿಯನ್ನ ನಿಯೋಜಿಸಿಕೊಂಡಿದ್ದಾರೆ. ಬನಶಂಕರಿಯಲ್ಲಿರುವ ಜ್ಯುವೆಲ್ಲರಿ ಶಾಪ್ ವೊಂದರ ಮೇಲೆ ಹಾಗೂ ಅವರ ಜಯನಗರ ಮನೆಯಲ್ಲಿ 15 ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ. ಇನ್ನೊಬ್ಬ ಜ್ಯುವೆಲ್ಲರ ಶಾಪ್ನ ಮೇಲೂ ಕೂಡ ದಾಳಿ ನಡೆಸಲಾಗಿದೆ. ತೆರಿಗೆ ಪಾವತಿಯಲ್ಲಿ ವ್ಯತ್ಯಾಸ ಕಂಡುಬಂದ ಹಿನ್ನೆಲೆ ದಾಳಿ ನಡೆಸಿರುವ ಅಧಿಕಾರಿಗಳು ಕಡತಗಳು ಹಾಗೂ ಲೆಕ್ಕ ಪತ್ರಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ:ಕೆಲ ಉಕ್ಕಿನ ಕಾರ್ಖಾನೆಗಳ ಮೇಲೆ ಐಟಿ ದಾಳಿ.. ದಾಖಲೆಗಳ ಪರಿಶೀಲನೆ.. ಪಾಲುದಾರಿಕೆ ಬಗ್ಗೆ ಶ್ರೀರಾಮುಲು ಸ್ಪಷ್ಟನೆ