ನವದೆಹಲಿ:ಕರ್ನಾಟಕದಲ್ಲಿ ಮೇ 10 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ 10 ಪೊಲೀಸ್ ಅಧಿಕಾರಿಗಳನ್ನು ವರ್ಗ ಮಾಡಿ ಚುನಾವಣಾ ಆಯೋಗ ಆದೇಶಿಸಿದೆ. "ಚುನಾವಣೆ ಸಂಹಿತೆಯ ಕಟ್ಟುನಿಟ್ಟಾಗಿ ಜಾರಿಗೊಳಿಸಲು ಮತ್ತು ಸುಗಮ ಚುನಾವಣೆಗಾಗಿ" ಉಪ ಪೊಲೀಸ್ ಆಯುಕ್ತ (ಡಿಸಿಪಿ) ಸೇರಿದಂತೆ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.
ಡಿಸಿಪಿ (ಉತ್ತರ) ಬೆಂಗಳೂರು, ಯಶವಂತಪುರ ಮತ್ತು ಬೆಂಗಳೂರಿನ ಎಸಿಪಿ ಮತ್ತು ರಾಜ ರಾಜೇಶ್ವರಿ ನಗರ, ಯಶವಂತಪುರ, ನಂದಿನಿ ಲೇಔಟ್ ಪೊಲೀಸ್ ಠಾಣೆ ಮತ್ತು ರಾಜಗೋಪಾಲ್ ನಗರ ಪೊಲೀಸ್ ಠಾಣೆಯ ನಾಲ್ವರು ಪೊಲೀಸ್ ಇನ್ಸ್‌ಪೆಕ್ಟರ್‌ಗಳು ವರ್ಗಾವಣೆಗೊಂಡಿದ್ದಾರೆ.
ಈ ಅಧಿಕಾರಿಗಳನ್ನು ರಾಜ್ಯ ಸಚಿವರೊಬ್ಬರ ಸಲಹೆಯ ಮೇರೆಗೆ ಬೇರೆಗೆ ನಿಯೋಜಿಸಲಾಗಿದೆ. ರಾಜ್ಯದಲ್ಲಿ ಚುನಾವಣಾ ಅಕ್ರಮ ಮತ್ತು ನ್ಯಾಯಸಮ್ಮತ ಪ್ರಕ್ರಿಯೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ. ವರ್ಗವಾದ ಅಧಿಕಾರಿಗಳು ಪ್ರತಿಯಾಗಿ ಯಾವುದೇ ದೂರು ಹೇಳಿಲ್ಲ. ಚುನಾವಣೆಯನ್ನು ಉತ್ತಮವಾಗಿ ನಡೆಸಲು ಆಯೋಗ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಅಧಿಕಾರಿಯೊಬ್ಬರು ಹೇಳಿದರು.