ಕರ್ನಾಟಕ

karnataka

ETV Bharat / state

IMA ಹಗರಣ: ಮಾಜಿ ಸಚಿವ ರೋಷನ್ ಬೇಗ್​ ನಿವಾಸ, ಮುಂಬೈನ 4 ಕಡೆ ಇಡಿ ದಾಳಿ - ರೋಷನ್ ಬೇಗ್ ಮನೆ ಮೇಲೆ ದಾಳಿ

Former Minister Roshan Baig: ಇಂದು ಬೆಳಗ್ಗೆ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್​​ ಅವರಿಗೆ ಐಟಿ ಅಧಿಕಾರಿಗಳು ಆಘಾತ​ ನೀಡಿದ್ದರು. ಇದರ ಬೆನ್ನಲ್ಲೇ ಮಾಜಿ ಸಚಿವ ರೋಷನ್ ಬೇಗ್ ನಿವಾಸದ ಮೇಲೂ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Roshan baig
ರೋಷನ್ ಬೇಗ್

By

Published : Aug 5, 2021, 10:28 AM IST

Updated : Aug 5, 2021, 1:15 PM IST

ಬೆಂಗಳೂರು: ಐಎಂಎ ಜ್ಯುವೆಲ್ಲರಿ ಹಗರಣದ ಪ್ರಮುಖ ಆರೋಪಿ ಹಾಗೂ ಮಾಜಿ ಸಚಿವ ಆರ್.ರೋಷನ್ ಬೇಗ್ ಮನೆ ಮೇಲೆ ಜಾರಿ ನಿರ್ದೇಶನಾಲಯ (ED) ಅಧಿಕಾರಿಗಳು ಬೆಳ್ಳಂಬೆಳಗ್ಗೆ ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಕೋಲ್ಸ್ ಪಾರ್ಕ್​ನಲ್ಲಿರುವ ರೋಷನ್ ಬೇಗ್ ಮನೆ ಸೇರಿದಂತೆ ಬೆಂಗಳೂರಿನ ಆರು ಕಡೆಗಳಲ್ಲಿ ದಾಳಿ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೇಗ್ ಆಸ್ತಿ ಜಪ್ತಿಗೆ ಹೈಕೋರ್ಟ್ ಆದೇಶ ನೀಡಿದ್ದು ಸಕ್ಷಮ ಪ್ರಾಧಿಕಾರದ ಅಧಿಕಾರಿಗಳು 16.81 ಕೋಟಿ ರೂ ಆಸ್ತಿ ಸೀಜ್ ಮಾಡಿದ್ದರು. ವಶಕ್ಕೆ ಪಡೆದುಕೊಂಡಿದ್ದ ಆಸ್ತಿ ಮೌಲ್ಯದ ವರದಿಯನ್ನು ಇಡಿ ಅಧಿಕಾರಿಗಳಿಗೆ ಸಕ್ಷಮ ಪ್ರಾಧಿಕಾರ ಕಳುಹಿಸಿತ್ತು. ಈ ವರದಿ ಆಧರಿಸಿ ಇಡಿ ಅಧಿಕಾರಿಗಳು ಇಂದು ರೋಷನ್ ಬೇಗ್ ಮನೆಗೆ ತೆರಳಿ ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಮಾಜಿ ಸಚಿವ ರೋಷನ್ ಬೇಗ್ ಮನೆ ಮೇಲೆ ಇಡಿ ದಾಳಿ

ಇದನ್ನೂ ಓದಿ:ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಐಷಾರಾಮಿ ಮನೆ, ಕಚೇರಿಗಳ ಮೇಲೆ ಐಟಿ ದಾಳಿ

ಇಂದು ನಸುಕಿನ ಜಾವ ಕಾಂಗ್ರೆಸ್ ಶಾಸಕ ಜಮೀರ್ ಅಹಮದ್ ಖಾನ್ ಅವರ ಐಷಾರಾಮಿ ಬಂಗಲೆ ಹಾಗೂ ಕಚೇರಿಗಳ ಮೇಲೆ ಏಕಕಾಲಕ್ಕೆ ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ.

ಮುಂಬೈನ 4 ಕಡೆ ದಾಳಿ:

ಐಎಂಎ ಹಗರಣ ಸಂಬಂಧ ಮುಂಬೈನ 4 ಕಡೆ ಇಡಿ ದಾಳಿ ಮಾಡಿ, ಪರಿಶೀಲನೆ ನಡೆಸಿದೆ. ಆದ್ರೆ ಯಾವ ಸ್ಥಳ ಮತ್ತು ಯಾರ ಆಸ್ತಿ ಮೇಲೆ ರೇಡ್ ಮಾಡಿದೆ ಎಂಬ ವಿವರ ಇನ್ನಷ್ಟೇ ಗೊತ್ತಾಗಬೇಕಿದೆ.

Last Updated : Aug 5, 2021, 1:15 PM IST

For All Latest Updates

ABOUT THE AUTHOR

...view details