ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣ ಸಂಬಂಧ ಇಡಿ(ಜಾರಿ ನಿರ್ದೇಶನಾಲಯ) ಅಟ್ಲಾಸ್ ಜ್ಯುವೆಲ್ಲರಿ ಇಂಡಿಯಾ ಲಿಮಿಟೆಡ್ನಿಂದ 26.59 ಕೋಟಿ ರೂ. ಮೌಲ್ಯದ ಹೂಡಿಕೆ ಹಣ, ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದೆ.
ಕಳೆದ ವಾರ ಮುಂಬೈ, ಬೆಂಗಳೂರು ಮತ್ತು ದೆಹಲಿ ಸೇರಿ ಮೂರು ಕಡೆ ಇಡಿ ದಾಳಿ ನಡೆಸಿತ್ತು. ದಾಳಿ ವೇಳೆ ಅಟ್ಲಾಸ್ ಜ್ಯುವೆಲ್ಲರಿ ಕಂಪನಿ ಪಿಎಂಎಲ್ಎ ಕಾಯ್ದೆ ಸಂಪೂರ್ಣ ಉಲ್ಲಂಘನೆ ಮಾಡಿರುವುದು ಪತ್ತೆಯಾಗಿದೆ. ಈ ಕಾರಣಕ್ಕೆ ಕಂಪನಿಯಲ್ಲಿ ಹೂಡಿಕೆಯಾಗಿದ್ದ ಹಣ ಹಾಗೂ ಚಿನ್ನಾಭರಣವನ್ನು ಅಧಿಕಾರಿಗಳು ಜಪ್ತಿ ಮಾಡಿದಿದ್ದಾರೆ ಎಂದು ತಿಳಿದುಬಂದಿದೆ.