ಕರ್ನಾಟಕ

karnataka

ETV Bharat / state

ಪ್ರಧಾನಿ ದೇವನಹಳ್ಳಿ ಕಾರ್ಯಕ್ರಮ: ಶಾಲಾ ಮಕ್ಕಳನ್ನು ಕರೆತರಲು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಸೂಚನೆ - ಈಟಿವಿ ಭಾರತ ಕನ್ನಡ

ದೇವನಹಳ್ಳಿಯಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣಕ್ಕಾಗಿ ಪ್ರಧಾನಿ ಮೋದಿ ಆಗಮಿಸುತ್ತಿರುವ ಹಿನ್ನೆಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಶಾಲಾ ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆ ತರುವ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

education-department-instructs-principals-to-bring-school-children
ಪ್ರಧಾನಿ ದೇವನಹಳ್ಳಿ ಕಾರ್ಯಕ್ರಮ: ಶಾಲಾ ಮಕ್ಕಳನ್ನು ಕರೆತರಲು ಪ್ರಾಂಶುಪಾಲರಿಗೆ ಶಿಕ್ಷಣ ಇಲಾಖೆ ಸೂಚನೆ

By

Published : Nov 8, 2022, 11:04 PM IST

ಬೆಂಗಳೂರು: ಶುಕ್ರವಾರ ದೇವನಹಳ್ಳಿಯಲ್ಲಿ ಕೆಂಪೇಗೌಡರ ಪ್ರತಿಮೆ ಅನಾವರಣಕ್ಕಾಗಿ ಪ್ರಧಾನಿ ಆಗಮಿಸುತ್ತಿರುವ ಹಿನ್ನೆಲೆ, ಶಾಲಾ ಮಕ್ಕಳನ್ನು ಕಾರ್ಯಕ್ರಮಕ್ಕೆ ಕರೆ ತರುವ ಬಗ್ಗೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.

ಮಾನ್ಯ ಪ್ರಧಾನ ಮಂತ್ರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಆಗಮಿಸುತ್ತಿರುವ ಪ್ರಯುಕ್ತ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲ ಸರ್ಕಾರಿ/ಅನುದಾನಿತ/ಅನುದಾನರಹಿತ ಪದವಿ ಪೂರ್ವ ಕಾಲೇಜುಗಳ ಪ್ರಾಂಶುಪಾಲರುಗಳು ತಮ್ಮ ಕಾಲೇಜಿನಿಂದ ನಿಗದಿಪಡಿಸಿದಷ್ಟು ವಿದ್ಯಾರ್ಥಿಗಳನ್ನು ಕರೆತರಬೇಕು. ಜೊತೆಗೆ ನೇಮಕ ಮಾಡಿರುವ ಬಸ್​​ನ ನೋಡಲ್ ಅಧಿಕಾರಿಗಳು ಹಾಗೂ ಪ್ರಾಂಶುಪಾಲರು ನಿಗದಿತ ಸಮಯಕ್ಕೆ ಸರಿಯಾಗಿ ಕಾಲೇಜಿನಿಂದ ಹೊರಡುವ ಬಸ್ ನಲ್ಲಿ ವಿದ್ಯಾರ್ಥಿಗಳನ್ನು ಕಾರ್ಯಕ್ರಮಕ್ಕೆ ಕ್ಷೇಮವಾಗಿ ಕರೆತರಬೇಕು ಎಂದು ಸೂಚಿಸಲಾಗಿದೆ.

ಕಾರ್ಯಕ್ರಮ ಮುಗಿದ ನಂತರ ವಾಪಸ್ ಕರೆದುಕೊಂಡು ಹೋಗಲು ಸೂಚಿಸಿದೆ. ತಪ್ಪಿದ್ದಲ್ಲಿ ಮುಂದಿನ ಆಗು-ಹೋಗುಗಳಿಗೆ ಸಂಬಂಧಪಟ್ಟ ಕಾಲೇಜಿನ ಪ್ರಾಂಶುಪಾಲರೇ ಜವಾಬ್ದಾರರಾಗಿರುತ್ತಾರೆ ಎಂದು ಎಚ್ಚರಿಕೆ ನೀಡಲಾಗಿದೆ.

ಇದನ್ನೂ ಓದಿ :ಬೆಂಗಳೂರು ಉತ್ತರ ವಿವಿಯಲ್ಲಿ ಪ್ರವೇಶಾತಿ ದಾಖಲಾತಿ ಪರಿಶೀಲನೆ: ನಕಲಿ ಅಂಕಪಟ್ಟಿ ಪತ್ತೆ

ABOUT THE AUTHOR

...view details