ಕರ್ನಾಟಕ

karnataka

ETV Bharat / state

ಮಕ್ಕಳ ಹಿತದೃಷ್ಟಿಯಿಂದ ಕೆಲವು ತೀರ್ಮಾನ: ಸಚಿವ ಮಧು ಬಂಗಾರಪ್ಪ - ಕಾಂಗ್ರೆಸ್ ಸರ್ಕಾರ

ಶಾಲೆ ಸಂಪೂರ್ಣವಾಗಿ ಆರಂಭ ಆಗದಿರುವ ಕಾರಣ ಮಕ್ಕಳಿಗೆ ತೊಂದರೆ ಆಗದಂತೆ ಪಠ್ಯ ಬದಲಾವಣೆ ಮಾಡಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

Education Minister Madhu Bangarappa
ಸಚಿವ ಮಧು ಬಂಗಾರಪ್ಪ

By

Published : Jun 2, 2023, 7:22 PM IST

ಬೆಂಗಳೂರು:ಶಾಲೆ ಪೂರ್ಣ ಪ್ರಮಾಣದಲ್ಲಿ ಆರಂಭ ಆಗಲು ಕೆಲವು ದಿನ ಆಗುತ್ತದೆ. ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ತೊಂದರೆ ಆಗದ ರೀತಿಯಲ್ಲಿ ಪಠ್ಯ ಬದಲಾವಣೆ ಕುರಿತಾಗಿ ನಿರ್ಧಾರ ಕೈಗೊಳ್ಳುತ್ತೇವೆ. ಈಗ ಬದಲಾವಣೆ ಆಗಿರುವ ಪಠ್ಯದಲ್ಲಿ ಯಾವುದನ್ನು ಕೈ ಬಿಡುತ್ತೇವೆ ಎಂಬ ಬಗ್ಗೆ ಈ ಸಂದರ್ಭದಲ್ಲಿ ಹೇಳುವುದಿಲ್ಲ. ಮಕ್ಕಳ ಹಿತದೃಷ್ಟಿಯಿಂದ ಪಠ್ಯ ಬದಲಾವಣೆ ಮಾಡುವ ನಿಟ್ಟಿನಲ್ಲಿ ಕೆಲವು ತೀರ್ಮಾನ ಮಾಡಲಾಗುವುದು ಎಂದು ವಿಧಾನಸೌಧದಲ್ಲಿ ಶುಕ್ರವಾರ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಬಿಜೆಪಿ ಅವಧಿಯಲ್ಲಿ ಪಠ್ಯ ಪರಿಷ್ಕರಣೆ ಮೂಲಕ ಕೇಸರೀಕರಣ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಟಿಪ್ಪು ಸೇರಿ ಕೆಲ ಅಂಶಗಳನ್ನು ಬಿಜೆಪಿ ಸರ್ಕಾರ ಪಠ್ಯದಿಂದ ಕೈ ಬಿಟ್ಟಿತ್ತು. ಪಠ್ಯದ ಕೇಸರೀಕರಣ ನಡೆದಿದೆ ಎಂದು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದಕ್ಕೆ ಕಾಂಗ್ರೆಸ್ ನಿಂದ ಸಾಕಷ್ಟು ಆಕ್ರೋಶ ವ್ಯಕ್ತವಾಗಿತ್ತು. ಜೊತೆಗೆ ಬಿಜೆಪಿ ವಿರುದ್ಧ ಪ್ರತಿಭಟನೆಯನ್ನೂ ನಡೆಸಿದ್ದರು.

ಇದೀಗ ಕಾಂಗ್ರೆಸ್ ಸರ್ಕಾರ ಬಿಜೆಪಿ ಅವಧಿಯ ಪಠ್ಯವನ್ನು ಪರಿಷ್ಕರಣೆ ಮಾಡಲು ಮುಂದಾಗಿದೆ. ಮಕ್ಕಳ ಹಿತದೃಷ್ಟಿಯಿಂದ ಪಠ್ಯ ಬದಲಾವಣೆ ಮಾಡುವ ನಿಟ್ಟಿನಲ್ಲಿ ಕೆಲವು ತೀರ್ಮಾನ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ‌. ಈ ಬಗ್ಗೆ ವಿದ್ಯಾರ್ಥಿಗಳಿಗೆ ಯಾವುದೇ ಸಮಸ್ಯೆ ಆಗದಂತೆ ಬದಲಾವಣೆ ಮಾಡಲು ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ.

ನಿನ್ನೆಯಿಂದ ಶಾಲೆಗಳು ಆರಂಭವಾಗಿದೆ. ಪಠ್ಯ ಪುಸ್ತಕ ಈ ವರ್ಷವೂ ವಿದ್ಯಾರ್ಥಿಗಳ ಕೈ ಸೇರುವಾಗ ತಡವಾಗುವ ಸಾಧ್ಯತೆ ಇದೆ. ಈ ನಡುವೆ ಮತ್ತೆ ಪಠ್ಯ ಪುಸ್ತಕ ಪಾಠಗಳ ಬದಲಾವಣೆ ಬಗ್ಗೆ ಸರ್ಕಾರ ಮಾತನಾಡುತ್ತಿದೆ. ಈ ಹಿಂದೆ ಈ ಬಗ್ಗೆ ಮಾತನಾಡಿದ್ದ ಸಮಾಜ ಕಲ್ಯಾಣ ಸಚಿವ ಡಾ‌ ಹೆಚ್. ಸಿ.ಮಹದೇವಪ್ಪ ಇತಿಹಾಸದ ಪುರುಷರನ್ನು ಇರಲಿಲ್ಲ ಎಂಬಂತೆ ಬದಲಾವಣೆ ಮಾಡಲಾಗಿದೆ. ಅಂತಹವುಗಳನ್ನು ತಿದ್ದುವ ಕಾರ್ಯ ಮಾಡುತ್ತೇವೆ ಎಂದಿದ್ದರು. ಇದರಿಂದ ಟಿಪ್ಪು ವಿಚಾರ ಮತ್ತೆ ಮುನ್ನಲೆಗೆ ಬರುವ ಸಾಧ್ಯತೆ ಇದೆ.

ಅಲ್ಲದೇ ಈ ಬಗ್ಗೆ ಮಹದೇವಪ್ಪ ಬಿಜೆಪಿ ಪಠ್ಯ ಪುಸ್ತಕ ವಿಚಾರದಲ್ಲಿ ಮಾಡಿರುವ ತಪ್ಪನ್ನು ತಿದ್ದುತ್ತೇವೆ. ಚುನಾವಣೆ ಮುನ್ನವೇ ಈ ಬಗ್ಗೆ ಮಾತನಾಡಿದ್ದೆವು ಅದರಂತೆ ಈಗ ಅದನ್ನೇ ಮಾಡತ್ತೇವೆ. ವಾಸ್ತವ ಸತ್ಯವನ್ನು ಪಠ್ಯದಲ್ಲಿ ಸೇರಿಸುತ್ತೇವೆ. ಸತ್ಯ ಅಲ್ಲದ್ದನ್ನ ತೆಗೆದುಹಾಕುತ್ತೇವೆ ಎಂಬ ನಿಲುವನ್ನು ತಿಳಿಸಿದ್ದರು.

ಈ ಬಗ್ಗೆ ಈಟಿವಿ ಭಾರತದ ಜೊತೆಗೆ ಮಾತನಾಡಿದ್ದ ಸಾಹಿತಿ ದೇವನೂರ ಮಹಾದೇವ ಅವರು ಪಠ್ಯ ಪುಸ್ತಕ ರಚನೆಗೆ ಸ್ವಾಯತ್ತ ಸಂಸ್ಥೆ ಇರಬೇಕು. ಇದರಲ್ಲಿ ಯಾರ ಹಸ್ತಕ್ಷೇಪವೂ ಇರಬಾರದು. ಕಳೆದ ಬಾರಿ ಪಠ್ಯ ಪುಸ್ತಕ ರಚನಾ ಸಮಿತಿಯಲ್ಲಿ ಯಾರೂ ಶಿಕ್ಷಣ ತಜ್ಞರಿರಲಿಲ್ಲ. ಹೀಗಾಗಿ ಸರ್ಕಾರ ಈ ಹಿಂದೆ ವಿತರಣೆ ಮಾಡಿರುವ ಪುಸ್ತಕದಲ್ಲಿರುವ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿರುವ ಪಠ್ಯಗಳನ್ನು ಪರೀಕ್ಷೆಗೆ ಪರಿಗಣಿಸದಂತೆ ಸುತ್ತೋಲೆ ಹೊರಡಿಸಬೇಕು ಎಂದು ಹೇಳಿದ್ದಾರೆ.

ಇದನ್ನೂ ಓದಿ:ಪಠ್ಯಪುಸ್ತಕದ ಯಡವಟ್ಟುಗಳನ್ನ ನಾವು ತಿದ್ದುತ್ತೇವೆ: ಡಾ ಎಚ್. ಸಿ.ಮಹದೇವಪ್ಪ

ABOUT THE AUTHOR

...view details