ಕರ್ನಾಟಕ

karnataka

ETV Bharat / state

ಮಕ್ಕಳ ಶಿಕ್ಷಣಕ್ಕೆ ವಿಘ್ನವಾಗದಂತೆ ಪೋಷಕರೇ ನಿಮ್ಮ ಮಕ್ಕಳಿಗೆ ಲಸಿಕೆ ಹಾಕಿಸಿ: ಶಿಕ್ಷಣ ಸಚಿವ ನಾಗೇಶ್ ಕರೆ - ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿದ ಶಿಕ್ಷಣ ಸಚಿವ

ರಾಜ್ಯದಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ಅಭಿಯಾನ ಆರಂಭವಾಗಿದೆ. ಈ ಹಿನ್ನೆಲೆ ಶಿಕ್ಷಣ ಸಚಿವ ಬಿ.ನಾಗೇಶ್ ಅವರು ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿದರು.

Education Minister Nagesh appeals to parents to vaccinate children
ಮಕ್ಕಳಿಗೆ ಕೊರೊನಾ ಲಸಿಕೆ ಹಾಕಿಸುವಂತೆ ಪೋಷಕರಿಗೆ ಮನವಿ ಮಾಡಿದ ಸಚಿವ ನಾಗೇಶ್​

By

Published : Jan 3, 2022, 11:51 AM IST

Updated : Jan 3, 2022, 1:41 PM IST

ಬೆಂಗಳೂರು:ಇಂದಿನಿಂದ ರಾಜ್ಯಾದ್ಯಂತ 15-18 ವರ್ಷದ ಮಕ್ಕಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗುತ್ತಿದೆ. ಈ ನಿಟ್ಟಿನಲ್ಲಿ ಮಕ್ಕಳ ಶಿಕ್ಷಣಕ್ಕೆ ವಿಘ್ನವಾಗಬಾರದು ಅಂದರೆ ಪೋಷಕರು ತಮ್ಮ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಶಿಕ್ಷಣ ಸಚಿವ ಬಿ.ನಾಗೇಶ್ ಕರೆ ನೀಡಿದರು.

ಮಕ್ಕಳಿಗೆ ಲಸಿಕೆ ಹಾಕಿಸುವಂತೆ ಪೋಷಕರಲ್ಲಿ ಮನವಿ ಮಾಡಿದ ಶಿಕ್ಷಣ ಸಚಿವರು

ಕೋವಿಡ್ ಜೊತೆಗೆ ಜೀವನ ನಡೆಸುವುದು ನಿರ್ವಾಯವಾಗಿದ್ದು, ಸೋಂಕು ಎದುರಿಸುವ ದೃಷ್ಟಿಯಿಂದ ಉಚಿತವಾಗಿ ಲಸಿಕೆ ನೀಡಲಾಗುತ್ತಿದೆ.‌ ಈಗಾಗಲೇ ಕೋಟ್ಯಂತರ ಜನರು ಲಸಿಕೆ ಹಾಕಿಸಿಕೊಂಡಿದ್ದು, ಇದೀಗ ಮಕ್ಕಳ ಸರದಿ ಬಂದಿದೆ. ಇಂದಿನಿಂದ 15-18 ವರ್ಷದ ಮಕ್ಕಳಿಗೆ ಲಸಿಕೆ ಆರಂಭವಾಗಿದ್ದು, ಎಲ್ಲ ತಾಲೂಕುಗಳಲ್ಲಿ ನೀಡಲಾಗುತ್ತದೆ.‌ ಎಲ್ಲರೂ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಕೊರೊನಾ ಸೋಂಕಿನ ಕಾರಣಕ್ಕೆ ಯಾವ ವಿದ್ಯಾರ್ಥಿಗಳ ಶಿಕ್ಷಣವೂ ಅಪೂರ್ಣವಾಗಬಾರದು. ಹೀಗಾಗಿ ಲಸಿಕಾ ಅಭಿಯಾನದಲ್ಲಿ ಭಾಗಿಯಾಗಬೇಕಿದೆ. ಪೋಷಕರು ಉತ್ಸಾಹ ತೋರಿ ಮಕ್ಕಳಿಗೆ ಲಸಿಕೆ ಹಾಕಿಸಿ, ಇದರಿಂದ ಶಾಲೆಯನ್ನು ಪೂರ್ಣವಾಗಿ ನಡೆಸಲು ಇದು ಸಹಕಾರಿಯಾಗಲಿದೆ. ಲಸಿಕೆ ಪಡೆದ ನಂತರವೂ ಕೋವಿಡ್ ನಿಯಮಗಳಾದ ಮಾಸ್ಕ್, ಸಾಮಾಜಿಕ ಅಂತರ, ಸ್ಯಾನಿಟೈಸ್ ಮಾಡುವುದನ್ನು ಮರೆಯಬಾರದು ಎಂದು ಕಿವಿ ಮಾತು ಹೇಳಿದರು.

ಲಸಿಕೆ ಪಡೆದ ಮಕ್ಕಳಿಗೆ ಮರುದಿನ ರಜೆ:

ಇನ್ನು ಕೋವಿಡ್ ಲಸಿಕೆ ಪಡೆದ ನಂತರ ಸಣ್ಣ ಜ್ವರ, ಮೈಕೈ ನೋವು, ತಲೆ ನೋವು ಬರುವುದು ಸಹಜ. ಹಾಗಾಗಿ ಲಸಿಕೆ ಪಡೆದ ಮಕ್ಕಳಿಗೆ ಮರುದಿನ ರಜೆ ನೀಡುವಂತೆ ಪೋಷಕರು ಒತ್ತಾಯಿಸಿದ್ದಾರೆ.‌ ಹೀಗಾಗಿ ಈ ವಿಚಾರವಾಗಿ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, ಲಸಿಕೆ ಪಡೆದ ನಂತರ ರಜೆ ತೆಗೆದುಕೊಳ್ಳಬಹುದು ಅಥವಾ ತರಗತಿಗೆ ಹಾಜರಾಗುವುದು ವಿದ್ಯಾರ್ಥಿಗಳ ಆಯ್ಕೆಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: 15 ರಿಂದ 18 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕಾ ಅಭಿಯಾನಕ್ಕೆ ಸಿಎಂ ಚಾಲನೆ

Last Updated : Jan 3, 2022, 1:41 PM IST

For All Latest Updates

TAGGED:

ABOUT THE AUTHOR

...view details