ಬೆಂಗಳೂರು :ಹಿಜಾಬ್ ಪ್ರಕರಣ ಸಂಬಂಧ ಹೈಕೋರ್ಟ್ ಮಹತ್ವದ ತೀರ್ಪು ಪ್ರಕಟಿಸಿದೆ. ಹೈಕೋರ್ಟ್ ತೀರ್ಪುನ್ನು ನಾವು ಸ್ವಾಗತಿಸುತ್ತೇವೆ ಎಂದು ಶಿಕ್ಷಣ ಸಚಿವ ನಾಗೇಶ್ ಟ್ವೀಟ್ ಮಾಡಿದ್ದಾರೆ.
ಹೈಕೋರ್ಟ್ ತೀರ್ಪು ಸ್ವಾಗತಿಸಿದ ಶಿಕ್ಷಣ ಸಚಿವ ನಾಗೇಶ್ ಶಾಲೆ-ಕಾಲೇಜುಗಳಲ್ಲಿ ಸಮವಸ್ತ್ರ ನಿಯಮ ವಿಚಾರವಾಗಿ ನಾವು ಕರ್ನಾಟಕ ಹೈಕೋರ್ಟ್‌ನ ಐತಿಹಾಸಿಕ ತೀರ್ಪನ್ನು ಸ್ವಾಗತಿಸುತ್ತೇವೆ. ಈ ನೆಲ, ನೆಲದ ಕಾನೂನು ಅಂತಿಮ ಎಂದು ಸಚಿವ ನಾಗೇಶ್ ಟ್ವೀಟ್ ಮಾಡಿದ್ದಾರೆ.
ಓದಿ:ಹಿಜಾಬ್ ನಿರ್ಬಂಧ ಪ್ರಶ್ನಿಸಿದ್ದ ಅರ್ಜಿಗಳನ್ನು ತಿರಸ್ಕರಿಸಿದ ತ್ರಿಸದಸ್ಯ ಪೀಠ: ಸರ್ಕಾರದ ಆದೇಶ ಎತ್ತಿಹಿಡಿದ ಹೈಕೋರ್ಟ್
ತರಗತಿಗೆ ಹಿಜಾಬ್ ಧರಿಸಿ ಬರದಂತೆ ನಿರ್ಬಂಧಿಸಿರುವ ಕ್ರಮ ಪ್ರಶ್ನಿಸಿ ಉಡುಪಿಯ ಸರ್ಕಾರಿ ಮಹಿಳಾ ಪದವಿಪೂರ್ವ ಕಾಲೇಜು ವಿದ್ಯಾರ್ಥಿನಿ ಸೇರಿದಂತೆ ಇತರ ವಿದ್ಯಾರ್ಥಿನಿಯರು ಹಾಗೂ ಅವರ ಪೋಷಕರು ಅರ್ಜಿ ಸಲ್ಲಿಸಿದ್ದರು. ಈ ಎಲ್ಲ ಅರ್ಜಿಗಳನ್ನು ತ್ರಿಸದಸ್ಯ ಪೀಠ ವಜಾ ಮಾಡಿ ಆದೇಶ ಮಾಡಿದೆ.
11 ದಿನಗಳ ವಿಚಾರಣೆ ಬಳಿಕ ಫೆಬ್ರವರಿ 25ರಂದು ಹೈಕೋರ್ಟ್ ತ್ರಿಸದಸ್ಯ ಪೀಠ ತೀರ್ಪು ಕಾಯ್ದಿರಿಸಿತ್ತು. ಮುಖ್ಯ ನ್ಯಾ. ರಿತುರಾಜ್ ಅವಸ್ಥಿ, ನ್ಯಾ. ಕೃಷ್ಣ ಎಸ್ ದೀಕ್ಷಿತ್, ನ್ಯಾ.ಜೆಎಂ ಖಾಜಿ ಅವರಿದ್ದ ಪೂರ್ಣ ಪೀಠ ಈ ತೀರ್ಪು ಪ್ರಕಟಿಸಿದೆ.