ಬೆಂಗಳೂರು: ಕೊರೊನಾದ ನಡುವೆಯೂ ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಯಶಸ್ವಿಯಾಗಿಸಲು ಸಹಕರಿಸಿದ್ದ ಎಲ್ಲಾ ಶಿಕ್ಷಕರಿಗೆ ಸಚಿವ ಸುರೇಶ್ ಕುಮಾರ್ ಟ್ವಿಟರ್ ಮೂಲಕ ಧನ್ಯವಾದ ಸಲ್ಲಿಸಿದ್ದಾರೆ.
ಅಸಾಧ್ಯವನ್ನು ಸಾಧ್ಯವಾಗಿಸಿದ ಎಲ್ಲ ಶಿಕ್ಷಕರಿಗೆ ಧನ್ಯವಾದ: ಸಚಿವ ಸುರೇಶ್ ಕುಮಾರ್ ಟ್ವೀಟ್
ಸರ್ಕಾರದ ವಿವಿಧ ಇಲಾಖೆಗಳು ಸಮನ್ವಯದಿಂದ ಕಾರ್ಯ ಮಾಡಿದರೆ ಎಲ್ಲವೂ ಸಾಧ್ಯ ಎಂಬುದನ್ನು ಎಸ್ಎಸ್ಎಲ್ಸಿ ಪರೀಕ್ಷೆಗಳು ರುಜುವಾತು ಮಾಡಿವೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಸುರೇಶ್ ಕುಮಾರ್
ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ಪರೀಕ್ಷೆ ಮುಂದೂಡಲಾಗಿತ್ತು. ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಮಾರ್ಚ್ 27 ರಿಂದ ಏಪ್ರಿಲ್ 9ಕ್ಕೆ ಪರೀಕ್ಷೆ ಮುಗಿದು, ಪರೀಕ್ಷಾ ಫಲಿತಾಂಶಗಳು ಬರುತ್ತಿದ್ದವು. ಆದರೆ ಕೊರೊನಾದಿಂದಾಗಿ ಎಲ್ಲವೂ ಬದಲಾಗಿ ಜೂನ್ 25 ರಿಂದ ಜುಲೈ 3ರವರೆಗೆ ಪರೀಕ್ಷೆ ದಿನಾಂಕ ನಿಗದಿಪಡಿಸಲಾಗಿತ್ತು. ಇದೀಗ ಅಂತಿಮವಾಗಿ ಎಸ್ಎಸ್ಎಲ್ಸಿ ಪರೀಕ್ಷೆ ಮುಕ್ತಾಯವಾಗಿದೆ.