ಕರ್ನಾಟಕ

karnataka

ETV Bharat / state

ಆದೇಶ ಉಲ್ಲಂಘಿಸಿ ತರಗತಿ ನಡೆಸುತ್ತಿರುವ ಶಾಲೆಗಳಿಗೆ ಶಿಕ್ಷಣ ಸಚಿವರಿಂದ ವಾರ್ನಿಂಗ್​​​ - ಶಾಲೆಗಳಿಗೆ ಶಿಕ್ಷಣ ಸಚಿವರಿಂದ ವಾರ್ನಿಂಗ್​

ಕೊರೊನಾ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪ್ರೀ ಎಲ್​​ಕೆಜಿಯಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ರಜೆ ನೀಡಿ ಸರ್ಕಾರ ಆದೇಶಿಸಿದೆ. ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಕೆಲ ಖಾಸಗಿ ಶಾಲೆಗಳು ತರಗತಿಗಳನ್ನು ಮುಂದುವರೆಸಿವೆ. ಇದನ್ನು ಗಮನಿಸಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ಅಂತಹ ಶಾಲೆಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

Education Minister Warning to Schools
ಶಿಕ್ಷಣ ಸಚಿವರಿಂದ ವಾರ್ನಿಂಗ್​

By

Published : Mar 11, 2020, 9:58 AM IST

ಬೆಂಗಳೂರು: ಕೊರೊನಾ ವೈರಸ್​ ಭೀತಿ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಶಾಲಾ ಮಕ್ಕಳಿಗೆ ಸರ್ಕಾರ ರಜೆ ಘೋಷಿಸಿದೆ. ಆದರೆ, ಸರ್ಕಾರದ ಆದೇಶ ಮೀರಿ ಕೆಲ ಶಾಲೆಗಳಲ್ಲಿ ತರಗತಿಗಳು ಮುಂದುವರೆದಿದ್ದು, ಅಂತಹವರಿಗೆ ಶಿಕ್ಷಣ ಸಚಿವರು ಖಡಕ್ ವಾರ್ನಿಂಗ್ ಕೊಟ್ಟಿದ್ದಾರೆ.

ಕೊರೊನಾ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯ ಪ್ರೀ ಎಲ್​​ಕೆಜಿಯಿಂದ ಐದನೇ ತರಗತಿವರೆಗಿನ ಮಕ್ಕಳಿಗೆ ರಜೆ ನೀಡಿ ಸರ್ಕಾರ ಆದೇಶಿಸಿದೆ. ಆದರೆ ಸರ್ಕಾರದ ಆದೇಶವನ್ನು ಗಾಳಿಗೆ ತೂರಿ ಕೆಲ ಖಾಸಗಿ ಶಾಲೆಗಳು ತರಗತಿಗಳನ್ನು ಮುಂದುವರೆಸಿವೆ. ಇದನ್ನು ಗಮನಿಸಿದ ಶಿಕ್ಷಣ ಸಚಿವ ಸುರೇಶ್​ ಕುಮಾರ್​, ಅಂತಹ ಶಾಲೆಗಳಿಗೆ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಶಿಕ್ಷಣ ಸಚಿವರಿಂದ ವಾರ್ನಿಂಗ್​

ಈ ಬಗ್ಗೆ ತಮ್ಮ ಫೇಸ್​ಬುಕ್​ ಪೇಜ್​​ನಲ್ಲಿ ಬರೆದುಕೊಂಡಿರುವ ಅವರು, "ಕೆಲ ಖಾಸಗಿ ಶಾಲೆಗಳು ಸರ್ಕಾರದ ಆದೇಶಕ್ಕೆ ಗೌರವ ಕೊಡದೆ ತಮ್ಮದೇ ಬೇರೆ ಸಾಮ್ರಾಜ್ಯ ಎಂದು ತಿಳಿದು ವ್ಯತಿರಿಕ್ತವಾಗಿ ವರ್ತಿಸುತ್ತಿರುವುದು ತಿಳಿದುಬಂದಿದೆ. ರಾಜ್ಯ ಸರ್ಕಾರದ ಆದೇಶವನ್ನು ಪಾಲಿಸದೆ ಇರುವ ಖಾಸಗಿ ಶಾಲೆಗಳಿಗೆ ಈ ಮೂಲಕ ಎಚ್ಚರಿಕೆ ನೀಡಲಾಗುತ್ತಿದೆ. ಸರ್ಕಾರದ ಆದೇಶ ಪಾಲಿಸದಿರುವ ಶಾಲೆಗಳು ಅದೆಷ್ಟೇ "ಪ್ರಭಾವಶಾಲಿ"ಯಾಗಿದ್ದರೂ ಅವುಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಎಳೆ ಮಕ್ಕಳ ಹಿತದೃಷ್ಟಿಯಿಂದ ಎಂದು ಮನಗಾಣಬೇಕು. ಸರ್ಕಾರದ ಆದೇಶ ಪಾಲಿಸದಿರುವುದು ನಮ್ಮ ಪ್ರತಿಷ್ಠೆ ಎಂದುಕೊಂಡಿರುವ ಆ ಎಲ್ಲಾ ಶಾಲೆಗಳಿಗೆ ಇದೊಂದು ಕಿವಿಮಾತು ಎಂದು ಎಚ್ಚರಿಕೆ ನೀಡಿದ್ದಾರೆ.

For All Latest Updates

TAGGED:

ABOUT THE AUTHOR

...view details