ಕರ್ನಾಟಕ

karnataka

ETV Bharat / state

ಪಿಯು ಫಲಿತಾಂಶ ಕುಸಿತಕ್ಕೆ ಸುರೇಶ್ ಕುಮಾರ್ ಕೈಗೊಂಡ ಕ್ರಮವೇ ಕಾರಣ: ಸಿದ್ದರಾಮಯ್ಯ ಆರೋಪ - ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ

ರಾಜ್ಯದಲ್ಲಿ ದ್ವಿತೀಯ ಪಿಯುಸಿ ಫಲಿತಾಂಶ ನಿನ್ನೆ ಪ್ರಕಟಗೊಂಡಿದ್ದು, ಪಿಯುಸಿ ಫಲಿತಾಂಶದಲ್ಲಿ ಈ ವರ್ಷ ಕುಸಿತ ಕಾಣಲು ಶಿಕ್ಷಣ ಸಚಿವರು ಕೈಗೊಂಡ ಕ್ರಮಗಳು ಕಾರಣ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ.

Siddramaiah
ಸಿದ್ದರಾಮಯ್ಯ

By

Published : Jul 15, 2020, 1:48 PM IST

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಶಿಕ್ಷಣ ಸಚಿವ ಸುರೇಶ್ ಕುಮಾರ್ ಕೈಗೊಂಡ ಕ್ರಮವೇ ಕಾರಣ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಟ್ವೀಟ್ ಮೂಲಕ ಈ ಆರೋಪ ಮಾಡಿರುವ ಸಿದ್ದರಾಮಯ್ಯ, ದ್ವಿತೀಯ ಪಿಯುಸಿ ಫಲಿತಾಂಶ ಕುಸಿಯಲು ಉಪನ್ಯಾಸಕರ ಕೊರತೆ ಕೂಡಾ ಕಾರಣ ಎನ್ನುವುದು ಸತ್ಯ. ಇದರ ಹೊಣೆಯನ್ನು ಪಿಯುಸಿ ಉಪನ್ಯಾಸಕರ ನೇಮಕಾತಿ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ ವಹಿಸಬೇಕಾಗುತ್ತದೆ ಎಂದಿದ್ದಾರೆ.

ಪಿಯುಸಿ ಉಪನ್ಯಾಸಕರ ಹುದ್ದೆಗೆ 2018ರಲ್ಲಿ ಬರೆದಿದ್ದ ಪರೀಕ್ಷೆಯ‌ಲ್ಲಿ ಉತ್ತೀರ್ಣರಾದ 1298 ಅಭ್ಯರ್ಥಿಗಳ ಆಯ್ಕೆಪಟ್ಟಿ ಅಂತಿಮವಾಗಿತ್ತು. ಆದರೆ, ಸಚಿವ ಸುರೇಶ್ ಕುಮಾರ್ ಮಧ್ಯೆಪ್ರವೇಶಿಸಿ‌‌ ಸ್ಥಳ ನಿಯುಕ್ತಿ ಕೌನ್ಸೆಲಿಂಗ್ ಪ್ರಕ್ರಿಯೆ ಸ್ಥಗಿತಗೊಳಿಸಿರುವುದು ಅಭ್ಯರ್ಥಿಗಳಿಗಷ್ಟೇ ಅಲ್ಲ, ವಿದ್ಯಾರ್ಥಿಗಳಿಗೂ ಮಾಡಿರುವ ಅನ್ಯಾಯ ಎಂದಿದ್ದಾರೆ.

ರಾಜ್ಯ ಸರ್ಕಾರದ ವಿರುದ್ಧ ನಿರಂತರವಾಗಿ ವಾಗ್ದಾಳಿ ನಡೆಸುತ್ತ ಬಂದಿರುವ ಸಿದ್ದರಾಮಯ್ಯ, ಸಚಿವ ಸುರೇಶ್ ಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ.

ABOUT THE AUTHOR

...view details