ಕರ್ನಾಟಕ

karnataka

ETV Bharat / state

ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ಹೊಣೆ ಶಿಕ್ಷಣ ಸಂಸ್ಥೆಗಳದ್ದು.. ರಾಷ್ಟ್ರಪತಿ ದ್ರೌಪದಿ ಮುರ್ಮು - ಶೈಕ್ಷಣಿಕ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆ

ರಾಷ್ಟ್ರೀಯ ಶಿಕ್ಷಣ ನೀತಿ 2020 ದೇಶದ ಶಿಕ್ಷಣದ ಗುಣಮಟ್ಟವನ್ನು ವೃದ್ಧಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇದು ಶೈಕ್ಷಣಿಕ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಸಹಕಾರಿಯಾಗಲಿದೆ ಎಂದು ರಾಷ್ಟ್ರಪತಿ ಹೇಳಿದ್ದಾರೆ.

President inaugurated St. Joseph's University
ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ ಉದ್ಘಾಟಿಸಿದ ರಾಷ್ಟ್ರಪತಿ

By

Published : Sep 27, 2022, 8:14 PM IST

ಬೆಂಗಳೂರು:ಎಲ್ಲ ಶಿಕ್ಷಣ ಸಂಸ್ಥೆಗಳು ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣದೊಂದಿಗೆ, ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಲು ಅಗತ್ಯ ತರಬೇತಿಯನ್ನು ನೀಡಲು ಕ್ರಮವಹಿಸಬೇಕು ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶಿಕ್ಷಣ ಸಂಸ್ಥೆಗಳಿಗೆ ಕರೆ ನೀಡಿದರು.

ಇಂದು ಬೆಂಗಳೂರು ನಗರದಲ್ಲಿರುವ ಸೇಂಟ್ ಜೋಸೆಫ್ಸ್ ವಿಶ್ವವಿದ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ವಿದ್ಯಾರ್ಥಿಯ ಜೀವನದಲ್ಲಿ ಶಿಕ್ಷಣ ಮುಖ್ಯ ಪಾತ್ರ ವಹಿಸುವುದರಿಂದ ಸಮಾಜದಲ್ಲಿ ಉತ್ತಮ ರೀತಿಯ ಬದಲಾವಣೆ ತರಲು ಗುಣಮಟ್ಟದ ಶಿಕ್ಷಣ ಅತ್ಯಗತ್ಯ. ದೇಶ ಅಭಿವೃದ್ಧಿ ಹೊಂದಬೇಕಾದರೆ, ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಅಭಿವೃದ್ಧಿ ಹೊಂದಬೇಕು. ಭಾರತದಲ್ಲಿರುವ ಶಿಕ್ಷಣ ಸಂಸ್ಥೆಗಳು ವಿಶ್ವದಲ್ಲೇ ಅತ್ಯಂತ ಉತ್ತಮ ಶಿಕ್ಷಣ ಸಂಸ್ಥೆಗಳಾಗಿ ಮಾರ್ಪಡಿಸಲು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ತಿಳಿಸಿದರು.

ಸೇಂಟ್ ಜೋಸೆಫ್ಸ್ ಶಿಕ್ಷಣ ಸಂಸ್ಥೆಯು ನೂರು ವರ್ಷಕ್ಕೂ ಹೆಚ್ಚಿನ ಕಾಲ ಶಿಕ್ಷಣ ಕ್ಷೇತ್ರಕ್ಕೆ ಬಹಳಷ್ಟು ಕೊಡುಗೆ ನೀಡಿದ್ದು, ಕೇವಲ ಕರ್ನಾಟಕ ರಾಜ್ಯ ಮಾತ್ರವಲ್ಲದೇ, ದೇಶವೇ ಹೆಮ್ಮೆ ಪಡುವ ವಿಷಯ ಇದಾಗಿದೆ. ರಾಷ್ಟ್ರೀಯ ಶಿಕ್ಷಣ ನೀತಿ 2020 ದೇಶದ ಶಿಕ್ಷಣದ ಗುಣಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಇದು ಶೈಕ್ಷಣಿಕ ಕ್ಷೇತ್ರದಲ್ಲಿ ಸಕಾರಾತ್ಮಕ ಬದಲಾವಣೆ ತರುವಲ್ಲಿ ಸಹಕಾರಿಯಾಗಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ ಮಾತನಾಡಿ, ಜ್ಞಾನವನ್ನು ಪಡೆಯಲು ಶಿಕ್ಷಣ ಅತ್ಯಗತ್ಯವಾಗಿದ್ದು, ಗುಣಮಟ್ಟದ ಶಿಕ್ಷಣದಿಂದ ಯಾವ ವಿದ್ಯಾರ್ಥಿ ಸಹ ವಂಚಿತರಾಗಬಾರದು ಎಂದರಲ್ಲದೇ, ಶಿಕ್ಷಣ ಕ್ಷೇತ್ರಕ್ಕೆ ಸೇಂಟ್ ಜೋಸೆಫ್ಸ್ ಶಿಕ್ಷಣ ಸಂಸ್ಥೆಯು ನೀಡಿರುವ ಕೊಡುಗೆ ಅಪಾರ. ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಲು ಸೇಂಟ್ ಜೋಸೆಫ್ಸ್ ಶಿಕ್ಷಣದಂತಹ ಸಂಸ್ಥೆಯಲ್ಲಿ ಶಿಕ್ಷಣ ಪಡೆಯಬೇಕು ಎಂದರು.

ಇದನ್ನೂ ಓದಿ:ರಕ್ಷಣಾ ಪಡೆಗಳಿಗೆ ಹೆಚ್ಎಎಲ್ ದೊಡ್ಡ ಶಕ್ತಿ..ಇಸ್ರೋ ಕೊಡುಗೆಯೂ ಶ್ಲಾಘನೀಯ : ರಾಷ್ಟ್ರಪತಿ ಮುರ್ಮು

ABOUT THE AUTHOR

...view details