ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆತ ಪ್ರಕರಣದಲ್ಲಿ ಭಾಗಿಯಾಗಿರುವ ಇಬ್ಬರು ಆರೋಪಿಗಳ ವಿರುದ್ಧದ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.
ಪ್ರಕರಣದ ಇಬ್ಬರು ಆರೋಪಿಗಳಾದ ಎನ್.ಡಿ.ಸಂಪತ್ ಕುಮಾರ್ ಮತ್ತು ಬಿ.ಎಂ.ಸಂತೋಷ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ರಾಚಯ್ಯ ಅವರಿದ್ದ ನ್ಯಾಯ ಪ್ರಕರಣದ ವಿಚಾರಣೆಗೆ ತಡೆ ನೀಡಿ ಆದೇಶಿಸಿದೆ.
ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು, ಘಟನೆಯಲ್ಲಿ ಆರೋಪಿಗಳ ಪಾತ್ರವಿದೆ ಎನ್ನುವ ಕುರಿತಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಬಂಧನ ಮಾಡಲಾಗಿದೆ. ಇದು ಕಾನೂನು ಬಾಹಿರ ಕ್ರಮವಾಗಿದೆ, ಹಾಗಾಗಿ ಪ್ರಕರಣದ ವಿಚಾರಣೆಗೆ ತಡೆ ನೀಡಬೇಕು ಎಂದು ಕೋರಿದರು. ನ್ಯಾಯಪೀಠ, ಮೇಲ್ನೋಟಕ್ಕೆ ಅರ್ಜಿದಾರರ ವಾದದಲ್ಲಿ ಹುರುಳಿದೆ ಎನಿಸುತ್ತಿದೆ ಎಂದು ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ಪ್ರಕರಣದ ವಿಚಾರಣೆಗೆ ತಡೆ ನೀಡಿತು.