ಬೆಂಗಳೂರು:ಉಪ ಚುನಾವಣಾ ಪ್ರಚಾರ ಕಣದಿಂದ ದೂರ ಉಳಿದಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಪ್ರಚಾರ ಕಾರ್ಯಕ್ಕೆ ಎಂಟ್ರಿ ಕೊಡುತ್ತಿದ್ದು, ನಾಳೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ.
ಉಪ ಚುನಾವಣಾ ಪ್ರಚಾರದ ಅಖಾಡಕ್ಕೆ ಸಿಎಂ... ನಾಳೆ ಶಿರಾದಲ್ಲಿ ಬಿಎಸ್ವೈ ಪ್ರಚಾರ - ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸುದ್ದಿ
ನಾಳೆ ಶಿರಾ ವಿಧಾನಸಭಾ ಕ್ಷೇತ್ರದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
bsy
ನಾಳೆ ರಸ್ತೆ ಮಾರ್ಗದ ಮೂಲಕ ಶಿರಾಗೆ ಬೆಳಗ್ಗೆ 11 ಗಂಟೆಗೆ ಭೇಟಿ ನೀಡಲಿರುವ ಸಿಎಂ, ಶಿರಾದ ಮದಲೂರಿನಲ್ಲಿ ಆಯೋಜಿಸಿರುವ ಉಪಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಂತರ ಮಧ್ಯಾಹ್ನ 3 ಗಂಟೆಯಿಂದ 5 ಗಂಟೆವರೆಗೆ ಶಿರಾ ಪಟ್ಟಣದಲ್ಲಿ ಚುನಾವಣಾ ಪ್ರಚಾರ ನಡೆಸಿ, ಬಿಜೆಪಿ ಅಭ್ಯರ್ಥಿ ರಾಜೇಶ್ ಗೌಡ ಪರ ಮತ ಯಾಚನೆ ಮಾಡಲಿದ್ದಾರೆ. ಸಂಜೆ 6.30 ಕ್ಕೆ ಬೆಂಗಳೂರಿಗೆ ಹಿಂದಿರುಗಲಿದ್ದಾರೆ.