ಬೆಂಗಳೂರು:ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಮತದಾರರ ಪಟ್ಟಿ ಪರಿಷ್ಕರಣೆ ಹೆಸರಿನಲ್ಲಿ ಮಾಹಿತಿ ಕದ್ದ ಆರೋಪ ಪ್ರಕರಣ ಸಂಬಂಧ ಸಂಪೂರ್ಣ ತನಿಖೆ ನಡೆಸಲು ರಾಜ್ಯ ಚುನಾವಣೆ ಆಯೋಗ ತನಿಖಾಧಿಕಾರಿಯನ್ನು ನೇಮಿಸಿದೆ. ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮ್ಲನ್ ಬಿಸ್ವಾಸ್ ಅವರನ್ನು ಈ ಪ್ರಕರಣದ ತನಿಖೆಯ ಜವಾಬ್ದಾರಿಯನ್ನು ನೀಡಿ ಚುನಾವಣೆ ಆಯೋಗ ಆದೇಶ ಹೊರಡಿಸಿದೆ.
ಎಫ್‌ಐಆರ್ ದಾಖಲು:ಚಿಲುಮೆ ಶೈಕ್ಷಣಿಕ ಸಾಮಾಜಿಕ ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆ ಹಾಗೂ ಆ ಸಂಸ್ಥೆಯ ಕೆ.ಎಂ.ಲೋಕೇಶ್ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.