ಬೆಂಗಳೂರು :ಬಹಿರಂಗ ಪ್ರಚಾರದ ಕೊನೆ ದಿನವಾದ ಸೋಮವಾರ ಬಿಜೆಪಿ ಹಾಗೂ ಕಾಂಗ್ರೆಸ್ ನೀತಿ ಸಂಹಿತೆ ಉಲ್ಲಂಘನೆ ಆಗಿದೆ ಎಂದು ಆರೋಪಿಸಿ ಪರಸ್ಪರ ದೂರು ನೀಡಿದ್ದು, ಚುನಾವಣಾ ಆಯೋಗ ಬಿಜೆಪಿ ಹಾಗೂ ಕಾಂಗ್ರೆಸ್ ಗೆ ಕಾರಣ ಕೇಳಿ ಷೋಕಾಸ್ ನೋಟಿಸ್ ಜಾರಿ ಮಾಡಿದೆ.
ಚುನಾವಣಾ ಆಯೋಗ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದ ಜಾಹೀರಾತು ವಿರುದ್ಧ ಕಾಂಗ್ರೆಸ್ ನಿಯೋಗ ನೀಡಿದ ಹಿನ್ನೆಲೆ ಚುನಾವಣಾ ಆಯೋಗ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ನೋಟಿಸ್ ನೀಡಿದ್ದಾರೆ. ಇತ್ತ ಬಿಜೆಪಿ ನಿಯೋಗ ಸೋನಿಯಾ ಗಾಂಧಿ ಪ್ರಚಾರದ ವೇಳೆ ಕರ್ನಾಟಕದ ಪ್ರತ್ಯೇಕತೆ ಬೆಂಬಲಿಸಿದ್ದಾರೆ ಎಂದು ಆರೋಪಿಸಿ ನೀಡಿದ್ದ ದೂರಿನ ಮೇರೆಗೆ ಚುನಾವಣಾ ಆಯೋಗ ರಾಜ್ಯ ಕಾಂಗ್ರೆಸ್ ಅಧ್ಯಕ್ಷರಿಗೆ ನೋಟಿಸ್ ಜಾರಿ ಮಾಡಿದೆ.
ಇದನ್ನೂ ಓದಿ :ವಿಧಾನಸಭಾ ಚುನಾವಣೆಗೆ ಬೆಂಗಳೂರು ಪೊಲೀಸರ ಸಕಲ ಸಿದ್ಧತೆ: ನಿರ್ಭೀತ ಮತದಾನಕ್ಕೆ ವೇದಿಕೆ ಸಿದ್ಧ
ಕಾಂಗ್ರೆಸ್ ಪಕ್ಷ ರಾಜ್ಯ ಬಿಜೆಪಿ ವಿರುದ್ಧ ಲಂಚದ ದರಪಟ್ಟಿ ಆರೋಪಿಸಿ ಜಾಹೀರಾತು ನೀಡಿತ್ತು. ಇದರ ವಿರುದ್ಧ ರಾಜ್ಯ ಬಿಜೆಪಿ ನಿಯೋಗ ಪುರಾವೆ ಇಲ್ಲದೆ ಸುಳ್ಳು ಆರೋಪದ ಲಂಚದ ದರಪಟ್ಟಿಯ ಜಾಹೀರಾತು ನೀಡಿದೆ ಎಂದು ಆರೋಪಿಸಿ ಕಾಂಗ್ರೆಸ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು. ಈ ಸಂಬಂಧ ಚುನಾವಣಾ ಆಯೋಗ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರಿಗೆ ನೋಟಿಸ್ ನೀಡಿತ್ತು.