ಬೆಂಗಳೂರು:ಬಿಬಿಎಂಪಿಗೆ ಚುನಾವಣೆ ನಡೆಸುವ ಸಂಬಂಧ ವಾರ್ಡ್ ಸಂಖ್ಯೆ ಹೆಚ್ಚಿಸಲು ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ ಕಾಯ್ದೆಗೆ ಮಾಡಿರುವ ತಿದ್ದುಪಡಿಯನ್ನು ಪರಿಗಣಿಸಬಾರದು, ಹಾಲಿ ಇರುವ ವಾರ್ಡ್ಗಳಿಗೆ ಚುನಾವಣೆ ನಡೆಸಲು ನಿರ್ದೇಶಿಸಬೇಕು ಎಂದು ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್ಗೆ ಮನವಿ ಮಾಡಿದೆ.
ಬಿಬಿಎಂಪಿಗೆ ಶೀಘ್ರ ಚುನಾವಣೆ ನಡೆಸಲು ಕೋರಿ ಪಾಲಿಕೆ ಮಾಜಿ ಸದಸ್ಯ ಶಿವರಾಜ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ವಾದಿಸಿ, ಪಾಲಿಕೆಯ ವಾರ್ಡ್ಗಳ ಸಂಖ್ಯೆಯನ್ನು 198ರಿಂದ 250 ಹೆಚ್ಚಿಸಲು ಅವಕಾಶವಿರುವ ಕೆಎಂಸಿ ಕಾಯ್ದೆ ತಿದ್ದುಪಡಿಯನ್ನು ಪರಿಗಣಿಸದಂತೆ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ನ್ಯಾಯಾಲಯ ಪರಿಗಣಿಸಬೇಕು.