ಬೆಂಗಳೂರು: ರಾಜ್ಯದ ಬೆಳಗಾವಿ, ಹುಬ್ಬಳ್ಳಿ- ಧಾರವಾಡ ಮತ್ತು ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದೆ. ಸೆ. 6 ರಂದು ಮತ ಎಣಿಕೆ ನಡೆಸಿ ಫಲಿತಾಂಶ ಪ್ರಕಟಿಸಲಾಗುತ್ತದೆ.
ರಾಜ್ಯ ಚುನಾವಣೆ ಆಯೋಗವು ಇಂದು ಚುನಾವಣೆ ವೆಳಾಪಟ್ಟಿ ಪ್ರಕಟಿಸಿದ್ದು, ಬೆಳಗಾವಿ ಮಹಾನಗರ ಪಾಲಿಕೆಯ 58 ವಾರ್ಡ್, ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ 82 ವಾರ್ಡ್ಗಳು ಮತ್ತು ಕಲಬುರಗಿ ಮಹಾನಗರ ಪಾಲಿಕೆಯ 55 ವಾರ್ಡ್ಗಳಿಗೆ ಚುನಾವಣೆಯನ್ನು ನಡೆಸಲಾಗುತ್ತದೆ.
ಬೆಳಗಾವಿ, ಹುಬ್ಬಳ್ಳಿ - ದಾರವಾಡ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ಚುನಾವಣೆ ನಡೆಯುವ ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಆಗಸ್ಟ್ 16 ರಿಂದ ಸೆಪ್ಟೆಂಬರ್ 6 ರತನಕ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುತ್ತದೆ ಎಂದು ರಾಜ್ಯ ಚುನಾವಣಾ ಆಯೋಗ ತನ್ನ ಆದೇಶದಲ್ಲಿ ತಿಳಿಸಿದೆ.
ಬೆಳಗಾವಿ, ಹುಬ್ಬಳ್ಳಿ - ದಾರವಾಡ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ಚುನಾವಣೆ ವೇಳಾಪಟ್ಟಿ ವಿವರ :
ಈ ತಿಂಗಳ 16 ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗುತ್ತಿದ್ದು ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಆರಂಭವಾಗಲಿದೆ. ಆ. 23 ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿರಲಿದೆ. ಆ. 24 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಆ. 26 ಅಭ್ಯರ್ಥಿಗಳು ನಾಮಪತ್ರ ಹಿಂದಕ್ಕೆ ಪಡೆಯಲು ಕೊನೆಯ ದಿನವಾಗಿದೆ.
ಬೆಳಗಾವಿ, ಹುಬ್ಬಳ್ಳಿ - ದಾರವಾಡ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವಾಗ ತಮ್ಮ ಹಿನ್ನೆಲೆ, ವಿದ್ಯಾರ್ಹತೆ, ಆಸ್ತಿ, ಪಾಸ್ತಿ ವಿವರ ಸೇರದಂತೆ ಮತದಾರರಿಗೆ ಅಗತ್ಯವಿರುವ ಮಾಹಿತಿಗಳನ್ನು ಒಳಗೊಂಡ ವಿವರವನ್ನು ಪ್ರಮಾಣಪತ್ರ ರೂಪದಲ್ಲಿ ಸಲ್ಲಿಸಬೇಕಾಗುತ್ತದೆ ಎಂದು ರಾಜ್ಯ ಚುನಾವಣೆ ಆಯೋಗ ಆದೇಶದಲ್ಲಿ ತಿಳಿಸಿದೆ. ಆಯಾ ಜಿಲ್ಲೆಯ ಜಿಲ್ಲಾಧಿಕಾರಿಗಳು ಮಹಾನಗರ ಪಾಲಿಕೆಯ ಚುನಾವಣೆಯ ಮುಖ್ಯ ಚುನಾವಣಾ ಅಧಿಕಾರಿಗಳಾಗಿರುತ್ತಾರೆ.
ಬೆಳಗಾವಿ, ಹುಬ್ಬಳ್ಳಿ - ದಾರವಾಡ, ಕಲಬುರಗಿ ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ