ಬೆಂಗಳೂರು: ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯಲ್ಲಿ ತೆರವಾಗಿರುವ ಅಧ್ಯಕ್ಷರ ಸ್ಥಾನಕ್ಕೆ ಚುನಾವಣೆ ಪ್ರಕ್ರಿಯೆ ಸೆಪ್ಟೆಂಬರ್ 27ಕ್ಕೆ ನಡೆಯಲಿದೆ.
ಅದರಂತೆ ಸೆಪ್ಟೆಂಬರ್ 27 ರಂದು ಮಧ್ಯಾಹ್ನ 12 ಘಂಟೆಗೆ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿನ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಚೇರಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ಸಭೆಯನ್ನು ಏರ್ಪಡಿಸಲಾಗಿದೆ. ಈ ಸಂಬಂಧ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಭ್ಯರ್ಥಿಗಳಿಂದ ನಾಮಪತ್ರಗಳನ್ನು ಸ್ವೀಕರಿಸಲಿದ್ದಾರೆ.
ಸೆ.27 ರಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಛೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತದೆ. ಅದೇ ದಿನ ಮಧ್ಯಾಹ್ನ 12 ಗಂಟೆಗೆ ಚುನಾವಣಾ ಸಭೆ ನಡೆಯಲಿದೆ.
ಸೆ.27ಕ್ಕೆ ರಾಜ್ಯ ವಕ್ಫ್ ಮಂಡಳಿಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ - ಸೆಪ್ಟೆಂಬರ್ 27 ರಂದು ವಕ್ಫ್ ಮಂಡಳಿ ಚುನಾವಣೆ
ಸೆ.27 ರಂದು ಬೆಳಗ್ಗೆ 10 ಗಂಟೆಯಿಂದ 11 ಗಂಟೆಗೆ ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ಮುಖ್ಯ ಕಛೇರಿಯಲ್ಲಿ ನಾಮಪತ್ರ ಸ್ವೀಕರಿಸಲಾಗುತ್ತದೆ. ಅದೇ ದಿನ ಮಧ್ಯಾಹ್ನ 12 ಗಂಟೆಗೆ ಚುನಾವಣಾ ಸಭೆ ನಡೆಯಲಿದೆ.
ರಾಜ್ಯ ವಕ್ಫ್ ಮಂಡಳಿ