ಕರ್ನಾಟಕ

karnataka

ETV Bharat / state

ಜು. 31ರಂದು ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಚುನಾವಣೆ - ರಮೇಶ್ ಕುಮಾರ್ ರಾಜೀನಾಮೆ

ರಮೇಶ್ ಕುಮಾರ್ ರಾಜೀನಾಮೆಯಿಂದ ತೆರವಾಗಿರುವ ಸ್ಪೀಕರ್ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಲಿದೆ ಎಂದು ವಿಧಾನಸಭಾ ಉಪ ಸಭಾಧ್ಯಕ್ಷ ಕೃಷ್ಣಾರೆಡ್ಡಿ ತಿಳಿಸಿದ್ದಾರೆ.

ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ

By

Published : Jul 29, 2019, 7:11 PM IST

ಬೆಂಗಳೂರು: ವಿಧಾನಸಭಾಧ್ಯಕ್ಷರ ಚುನಾವಣೆ ಜುಲೈ 31ಕ್ಕೆ ನಡೆಯಲಿದೆ ಎಂದು ವಿಧಾನಸಭೆ ಉಪ ಸಭಾಧ್ಯಕ್ಷ ಕೃಷ್ಣಾರೆಡ್ಡಿ ಸದನದಲ್ಲಿ ಘೋಷಣೆ ಮಾಡಿದ್ರು.

ರಮೇಶ್ ಕುಮಾರ್ ರಾಜೀನಾಮೆಯಿಂದ ತೆರವಾಗಿರುವ ಸ್ಪೀಕರ್ ಸ್ಥಾನಕ್ಕೆ ಬುಧವಾರ ಚುನಾವಣೆ ನಡೆಯಲಿದೆ. ನಾಳೆ ಮಧ್ಯಾಹ್ನ 12 ಗಂಟೆಯೊಳಗೆ ಅಭ್ಯರ್ಥಿ ವಿಧಾನಸಭೆ ಕಾರ್ಯದರ್ಶಿಗೆ ಸೂಚನಾ ಪತ್ರ ಸಲ್ಲಿಸಬೇಕು.

ಉಪಸಭಾಧ್ಯಕ್ಷ ಕೃಷ್ಣಾರೆಡ್ಡಿ

ಬಿಜೆಪಿಯ ಹಿರಿಯ ಶಾಸಕ ಹಾಗೂ ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಸ್ಪೀಕರ್ ಸ್ಥಾನಕ್ಕಾಗಿ ಸೂಚನಾ ಪತ್ರ ಸಲ್ಲಿಸುವುದು ಬಹುತೇಕ ಖಚಿತವಾಗಿದೆ. ಇನ್ನು ದೋಸ್ತಿಗಳು ಸಂಖ್ಯಾಬಲದ ಕೊರತೆ ಹಿನ್ನೆಲೆ ಯಾವುದೇ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಅನುಮಾನವಾಗಿದೆ.

ಸಂಖ್ಯಾಬಲ ಬಿಜೆಪಿ ಪರವಾಗಿದ್ದು, ಸ್ಪೀಕರ್ ಸ್ಥಾನಕ್ಕೆ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.

ABOUT THE AUTHOR

...view details