ಬೆಂಗಳೂರು:ಶಿರಾ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ ಉಸ್ತುವಾರಿ ತಂಡಗಳ ಪಟ್ಟಿಯನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರಕಟಿಸಿದ್ದಾರೆ.
ಶಿರಾ, ಆರ್.ಆರ್.ನಗರ ಉಪಚುನಾವಣೆ: ಉಸ್ತುವಾರಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ - ಶಿರಾ ಮತ್ತು ಆರ್ಆರ್ ನಗರ ಉಪ ಚುನಾವಣೆ,
ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಗೆ ಬಿಜೆಪಿ ಉಸ್ತುವಾರಿಗಳ ಪಟ್ಟಿ ಪ್ರಕಟಿಸಿದೆ.
ಶಿರಾ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಡಾ. ಅಶ್ವತ್ಥ ನಾರಾಯಣ, ಸಚಿವ ವಿ. ಸೋಮಣ್ಣ, ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್, ಸಂಸದೆ ಶೋಭಾ ಕರಂದ್ಲಾಜೆ, ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದರಾದ ಪಿ.ಸಿ.ಮೋಹನ್, ನಾರಾಯಣಸ್ವಾಮಿ, ಪ್ರತಾಪ್ ಸಿಂಹ, ಶಾಸಕಿ ಪೂರ್ಣಿಮಾ ಶ್ರೀನಿವಾಸ್, ರಾಜ್ಯ ಉಪಾಧ್ಯಕ್ಷ ಎಂ.ರಾಜೇಂದ್ರ, ಪಕ್ಷದ ಮುಖಂಡ ತಿಪ್ಪೇಸ್ವಾಮಿ ಅವರನ್ನು ಚುನಾವಣಾ ಉಸ್ತುವಾರಿಗಳನ್ನಾಗಿ ನೇಮಿಸಲಾಗಿದೆ.
ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜ್ಯ ಉಪಾಧ್ಯಕ್ಷ ಅರವಿಂದ ಲಿಂಬಾವಳಿ, ಸಚಿವರಾದ ಆರ್.ಅಶೋಕ್, ಎಸ್.ಟಿ ಸೋಮಶೇಖರ್, ಭೈರತಿ ಬಸವರಾಜ್, ಶಾಸಕ ಎಸ್.ಆರ್.ವಿಶ್ವನಾಥ್, ರಾಜ್ಯ ಉಪಾಧ್ಯಕ್ಷ ಎಂ. ಶಂಕರಪ್ಪ, ಶಾಸಕ ಮತ್ತು ರಾಜ್ಯ ಕಾರ್ಯದರ್ಶಿಗಳಾದ ಎಂ.ಸತೀಶ್ ರೆಡ್ಡಿ,ಪಿ.ಮುನಿರಾಜ ಗೌಡ ಅವರನ್ನು ನೇಮಕ ಮಾಡಲಾಗಿದೆ.