ಕರ್ನಾಟಕ

karnataka

ETV Bharat / state

ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

ನಿನ್ನೆ ನಾಮಪತ್ರ ವಾಪಸ್​​​ ಪಡೆಯಲು ಕೊನೆಯ ದಿನವಾಗಿತ್ತು. ಆದರೆ ಬಿಜೆಪಿಯ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಉಮೇದುವಾರಿಕೆ ವಾಪಸ್ ಪಡೆದಿಲ್ಲ. ಹೀಗಾಗಿ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ ಎದುರಾಗಿದೆ.

Election of the Southeastern Graduate Field: shrinivas compit opposite of chidanand gowda
ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿಗೆ ಬಂಡಾಯದ ಬಿಸಿ

By

Published : Oct 13, 2020, 7:44 AM IST

ಬೆಂಗಳೂರು:ವಿಧಾನ ಪರಿಷತ್​ನ ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಬಂಡಾಯದ ಬಿಸಿ ಎದುರಿಸಬೇಕಿದೆ. ಬಿಜೆಪಿ ಅಭ್ಯರ್ಥಿಯಾಗಿ ಚಿದಾನಂದ್ ಗೌಡ ಸ್ಪರ್ಧೆಗೆ ಇಳಿದಿದ್ದು, ಅವರ ವಿರುದ್ಧ ಶ್ರೀನಿವಾಸ್ ತೊಡೆ ತಟ್ಟಿ ನಿಂತಿದ್ದಾರೆ.

ನಿನ್ನೆ ನಾಮಪತ್ರ ವಾಪಸ್​​​ ಪಡೆಯಲು ಕೊನೆಯ ದಿನವಾಗಿತ್ತು. ಆದರೆ, ಬಿಜೆಪಿಯ ಬಂಡಾಯ ಅಭ್ಯರ್ಥಿ ಶ್ರೀನಿವಾಸ್ ಉಮೇದುವಾರಿಕೆ ವಾಪಸ್ ಪಡೆದಿಲ್ಲ. ಶ್ರೀನಿವಾಸ್ ಹಿರಿಯೂರು ಬಿಜೆಪಿ ಶಾಸಕಿ ಪೂರ್ಣಿಮಾ ಅವರ ಪತಿ. ಅವರು ಆಗ್ನೇಯ ಪದವೀಧರ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು. ಬಿಜೆಪಿಯಿಂದ ಟಿಕೆಟ್ ಸಿಗದ ಹಿನ್ನೆಲೆ ಬಂಡಾಯವಾಗಿ ಸ್ಪರ್ಧಿಸುತ್ತಿದ್ದಾರೆ. ಆ ಮೂಲಕ ಬಿಜೆಪಿಗೆ ಬಂಡಾಯದ ಬಿಸಿ ತಾಗುವುದು ಬಹುತೇಕ ಖಚಿತವಾಗಿದೆ.‌

ಶ್ರೀನಿವಾಸ್ ಶಿರಾ ಉಪ ಚುನಾವಣೆಯ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದರು.

ABOUT THE AUTHOR

...view details