ಬೆಂಗಳೂರು:ರಾಜ್ಯ ಚುನಾವಣಾ ಆಯೋಗ ಅವಧಿ ಮುಕ್ತಾಯವಾಗಲಿರುವ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ಹಾಗೂ ಗಾಮ ಪಂಚಾಯಿತಿಗಳಲ್ಲಿ ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಉಪ ಚುನಾವಣೆ ದಿನಾಂಕವನ್ನು ಘೋಷಿಸಿದೆ.
2022ರ ಆಗಸ್ಟ್ನಿಂದ ನವೆಂಬರ್ವರೆಗೆ ಅವಧಿ ಮುಕ್ತಾಯವಾಗಲಿರುವ 252 ಗ್ರಾಮ ಪಂಚಾಯಿತಿಗಳಿಗೆ ಸಾರ್ವತ್ರಿಕ ಚುನಾವಣೆ ಹಾಗೂ 187 ಖಾಲಿ ಇರುವ ಗ್ರಾಮ ಪಂಚಾಯತ್ ಸದಸ್ಯ ಸ್ಥಾನಗಳಿಗೆ ಉಪಚುನಾವಣೆಯ ದಿನಾಂಕ ಪ್ರಕಟಿಸಿದೆ. ಅದರಂತೆ ಅಕ್ಟೋಬರ್ 28ರಂದು ಮತದಾನ ನಡೆಯಲಿದೆ.