ಬೆಂಗಳೂರು: ಚುನಾವಣೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಬೆಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ. ವಿವಿ ಮೌಲ್ಯಮಾಪನ ಕುಲಸಚಿವ ಡಾ.ಶಿವರಾಜ್ ಈ ಆದೇಶ ಹೊರಡಿಸಿದ್ದಾರೆ.
ಲೋಕಲ್ ಫೈಟ್... ಬೆಂಗಳೂರು ವಿವಿ ಎಕ್ಸಾಂ ಪೋಸ್ಟ್ಪೋನ್ - news kannada
ಬಿಬಿಎಂಪಿ ಉಪ ಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆ ನಾಳೆ ನಡೆಯಬೇಕಿದ್ದ ಬೆಂಗಳೂರು ವಿವಿಯ ಎಲ್ಲ ಪರೀಕ್ಷೆಗಳನ್ನು ಮುಂದೂಡಿ ಆದೇಶ ಹೊರಡಿಸಲಾಗಿದೆ.
ಸಂಗ್ರಹ ಚಿತ್ರ
ಬಿಬಿಎಂಪಿ ಉಪಚುನಾವಣೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, 2 ಮತ್ತು 6ನೇ ಸೆಮಿಸ್ಟರ್ನ ಎಲ್ಲ ಪರೀಕ್ಷೆಗಳು ಜೂನ್ 2 ಭಾನುವಾರದಂದು ನಡೆಯಲಿವೆ ಎಂದು ಅವರು ತಿಳಿಸಿದ್ದಾರೆ.ಬಿಎ, ಬಿಎಸ್ಸಿ, ಬಿಕಾಂ, ಬಿಬಿಎ, ಬಿಹೆಚ್ಎಂ, ಬಿಸಿಎ ಪರೀಕ್ಷೆಗಳನ್ನು ಮುಂದೂಡಲಾಗಿದ್ದು, ಅಂದು ಬೆಳಗ್ಗೆ 9:30 ರಿಂದ 12:30ಕ್ಕೆ ಮತ್ತು 2 ರಿಂದ 5 ಗಂಟೆಗೆ ಪರೀಕ್ಷೆ ನಡೆಯಲಿವೆ.