ಕರ್ನಾಟಕ

karnataka

ETV Bharat / state

ಬಿಬಿಎಂಪಿ ಬಿಡಿಎ ಜಲಮಂಡಳಿಯಿಂದ 93 ಕೋಟಿ ರೂಪಾಯಿ ಬಿಲ್ ಬಾಕಿ: ವಿದ್ಯುತ್ ಸಂಪರ್ಕ ಕಡಿತಗೊಳಿಸಲು ಮುಂದಾದ ಬೆಸ್ಕಾಂ.. - etv bharath kannada news

ಬಿಬಿಎಂಪಿ, ಬಿಡಿಎ ಹಾಗೂ ಜಲಮಂಡಳಿಗಳೇ ಸುಮಾರು 93 ಕೋಟಿ ರೂ ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. 7 ದಿನಗಳ ಒಳಗಾಗಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ.

ಬಿಬಿಎಂಪಿ
ಬಿಬಿಎಂಪಿ

By

Published : Nov 3, 2022, 8:45 PM IST

ಬೆಂಗಳೂರು: ಬಿಬಿಎಂಪಿ ಸೇರಿದಂತೆ ಹಲವಾರು ಸರ್ಕಾರಿ ಕಚೇರಿಗಳೇ ಕೋಟ್ಯಂತರ ರೂಪಾಯಿ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಮಾಹಿತಿ ಬೆಳಕಿಗೆ ಬಂದಿದೆ.

ಬಿಬಿಎಂಪಿ, ಬಿಡಿಎ ಹಾಗೂ ಜಲಮಂಡಳಿಗಳೇ ಸುಮಾರು 93 ಕೋಟಿ ರೂ ಗಳಷ್ಟು ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿವೆ. 7 ದಿನಗಳ ಒಳಗಾಗಿ ಬಿಲ್ ಪಾವತಿಸದಿದ್ದರೆ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗುವುದು ಎಂದು ಬೆಸ್ಕಾಂ ಎಚ್ಚರಿಕೆ ನೀಡಿದೆ.

ಅದರಲ್ಲೂ ಬೆಸ್ಕಾಂ ಜಯನಗರ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹಲವಾರು ಸರ್ಕಾರಿ ಕಚೇರಿಗಳು ಸುಮಾರು 93.70 ಕೋಟಿ ರೂ.ಗಳಷ್ಟು ವಿದ್ಯುತ್ ಬಾಕಿ ಉಳಿಸಿಕೊಂಡಿವೆ. ಜಯನಗರ, ಹೊಸೂರು ರಸ್ತೆ, ಇಸ್ರೋ ಲೇಔಟ್, ಜೆ. ಪಿ ನಗರ, ಪದ್ಮನಾಭನಗರ, ಕತ್ರಿಗುಪ್ಪೆ, ಉತ್ತರಹಳ್ಳಿ ವ್ಯಾಪ್ತಿಯಲ್ಲಿನ ಕಚೇರಿಗಳು 2022ರ ಸೆಪ್ಟೆಂಬರ್ ಅಂತ್ಯದವರೆಗೆ 93.70 ಕೋಟಿ ರೂ. ವಿದ್ಯುತ್ ಶುಲ್ಕ ಪಾವತಿಸಬೇಕಾಗಿದೆ ಎನ್ನುವ ಮಾಹಿತಿ ದೊರೆತಿದೆ.

ಜಲಮಂಡಳಿ - 47.37 ಕೋಟಿ ರೂ. ಬಿಡಿಎ - 2.97 ಕೋಟಿ ರೂ. ವಿದ್ಯುತ್ ಶುಲ್ಕ ಪಾವತಿಸಬೇಕಿದೆ ಎಂದು ಬೆಸ್ಕಾಂ ಮೂಲಗಳು ಹೇಳಿವೆ.

ಓದಿ:ರಾಜ್ಯದಲ್ಲಿ ಮತ್ತೆ ವಿದ್ಯುತ್ ದರ ಏರಿಕೆ ಶಾಕ್: ಅ.1 ರಿಂದ ಮತ್ತಷ್ಟು ದುಬಾರಿ

ABOUT THE AUTHOR

...view details