ಕರ್ನಾಟಕ

karnataka

ETV Bharat / state

ಕಲುಷಿತ ನೀರು ಸೇವಿಸಿ ವೃದ್ಧೆ ಸಾವು ಪ್ರಕರಣ: ಹೊಸಪೇಟೆ ನಗರಸಭೆ ಆಯುಕ್ತ ಸೇರಿ ಮೂವರು ಅಮಾನತು - ಅಮಾನತು

ವಿಜಯನಗರ ಜಿಲ್ಲೆಯ ಕಾರಗನೂರು ಗ್ರಾಮದಲ್ಲಿ ಕಲಷಿತ ನೀರು ಸೇವಿಸಿ ವೃದ್ಧೆ ಸಾವನ್ನಪ್ಪಿದ ಪ್ರಕರಣ ಸಂಬಂಧ ನಗರಸಭೆ ಆಯುಕ್ತ ಸೇರಿ ಮೂವರನ್ನು ಅಮಾನತು ಮಾಡಲಾಗಿದೆ.

ಅಮಾನತು
ಅಮಾನತು

By ETV Bharat Karnataka Team

Published : Jan 8, 2024, 3:58 PM IST

ಬೆಂಗಳೂರು : ವಿಜಯನಗರ ಜಿಲ್ಲೆ ಹೊಸಪೇಟೆ ನಗರಸಭೆಯ ಕಾರಿಗನೂರಿನ ವಾರ್ಡ್​ನಲ್ಲಿ ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥಗೊಂಡು ಸೀತಮ್ಮ (66) ಎಂಬುವರು ಮೃತಪಟ್ಟಿರುವ ಘಟನೆ ನಡೆದಿತ್ತು. ಈ ಪ್ರಕರಣ ಸಂಬಂಧ ನಗರಸಭೆ ಆಯುಕ್ತರಾದ ಬಂಡಿ ವಡ್ಡರ್, ಸಹಾಯಕ ಕಾರ್ಯಪಾಲಕ ಅಭಿಯಂತರ ಸತೀಶ್ ಹಾಗೂ ಕಿರಿಯ ಅಭಿಯಂತರ ಖಾಜಿ ಅವರನ್ನು ಅಮಾನತುಗೊಳಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ.

ಮೂವರು ಅಧಿಕಾರಿಗಳನ್ನು ಕೂಡಲೇ ಅಮಾನತು ಮಾಡಿ ಇಲಾಖಾ ವಿಚಾರಣೆ ನಡೆಸಲು ನಿರ್ದೇಶನ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ದಿವಾಕರ್ ಅವರ ಜತೆ ನಿರಂತರ ಸಂಪರ್ಕದಲ್ಲಿದ್ದು, ಮಾಹಿತಿ ಪಡೆದು ಪ್ರಕರಣ ಮರುಕಳಿಸದಂತೆ ಎಲ್ಲ ರೀತಿಯ ಮುನ್ನಚ್ಚರಿಕೆ ವಹಿಸುವಂತೆ ಸೂಚನೆ ನೀಡಿದ್ದಾರೆ. ಜೊತೆಗೆ ಕುಡಿಯುವ ನೀರು ಪೊರೈಕೆ ಹಾಗೂ ಒಳಚರಂಡಿ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ನಿಗಾ ವಹಿಸುವಂತೆಯೂ ಸಚಿವ ಜಮೀರ್ ಅಹಮದ್ ಖಾನ್ ಖಡಕ್​ ಎಚ್ಚರಿಕೆ ನೀಡಿದ್ದಾರೆ.

ಶೋಕಾಸ್ ನೋಟಿಸ್:ಇದಕ್ಕೂ ಮುನ್ನ ಘಟನೆ ಬೆಳಕಿಗೆ ಬರುತ್ತಿದ್ದಂತೆ ಎಚ್ಚೆತ್ತುಕೊಂಡಜಿಲ್ಲಾಧಿಕಾರಿ ಎಂ ಎಸ್ ದಿವಾಕರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾತನಾಡಿದ ಅವರು, ಶುದ್ಧ ಕುಡಿಯುವ ನೀರು ಘಟಕದಿಂದ ಉಚಿತ ಕುಡಿಯುವ ನೀರನ್ನು ಗ್ರಾಮಸ್ಥರಿಗೆ ನೀಡುವಂತೆ ಸೂಚನೆ ನೀಡಲಾಗಿದೆ. ಪ್ರಕರಣ ಕುರಿತಂತೆ ಕಾರಿಗನೂರು, ಶಿಕಾರಿ ಕ್ಯಾಂಪ್‍ಗೆ ಕಲುಷಿತ ನೀರು ಸರಬರಾಜಾಗಿದೆ. ಕಲುಷಿತ ನೀರು ಪೂರೈಕೆಯಿಂದ ಘಟನೆ ನಡೆದಿದ್ದರೆ, ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳಿಗೆ ಶೋಕಾಸ್ ನೋಟಿಸ್​ ನೀಡುತ್ತೇವೆ ಎಂದು ತಿಳಿಸಿದರು.

ಅಲ್ಲದೆ, 27 ಜನರು ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಮೂವರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಅಗಿದ್ದಾರೆ. ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಶಂಕರ್ ನಾಯಕ್ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ :ವಿಜಯನಗರ: ಕಲುಷಿತ ನೀರು ಸೇವಿಸಿ ವೃದ್ಧೆ ಸಾವು

ABOUT THE AUTHOR

...view details