ಬೆಂಗಳೂರು: ನಗರದಲ್ಲಿ ಆನೆ ದಂತ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
ಆನೆ ದಂತ ಮಾರಾಟ: ಬೆಂಗಳೂರಿನಲ್ಲಿ ಇಬ್ಬರು ಆರೋಪಿಗಳ ಬಂಧನ
ಬೆಂಗಳೂರಿನಲ್ಲಿ ಆನೆ ದಂತ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ.
ರಾಮನಗರ ಮಾಗಡಿ ಕುದೂರು ಗ್ರಾಮದ ಮಂಜುನಾಥ್ ಹಾಗೂ ಲೋಕೇಶ್ ಬಂಧಿತರು. ಪ್ರಕರಣದಲ್ಲಿ ಕೃಷ್ಣ ತಲೆಮರೆಸಿಕೊಂಡಿದ್ದಾನೆ. ವಾಹನಕ್ಕೆ ಸಿಲುಕಿ ಮೃತಪಟ್ಟಿದ್ದ ಆನೆಯ ದಂತ ಕದ್ದಿದ್ದ ಆರೋಪಿ ಕೃಷ್ಣ ಆಟೋ ಚಾಲಕ ಲೊಕೇಶ್ಗೆ ದಂತ ನೀಡಿ 5 ಲಕ್ಷಕ್ಕೆ ಮಾರಾಟ ಮಾಡಿಕೊಡುವಂತೆ ಹೇಳಿದ್ದಾನೆ. ಈ ಕೃತ್ಯಕ್ಕೆ ಡಾಬಾವೊಂದರಲ್ಲಿ ಕೆಲಸ ಮಾಡುತ್ತಿದ್ದ ಮಂಜುನಾಥ್ ಪೂಜಾರಿ ಎಂಬಾತ ಕೈ ಜೋಡಿಸಿದ್ದಾನೆ ಎಂದು ತಿಳಿದು ಬಂದಿದೆ.
ದಂತವನ್ನು ಬೆಂಗಳೂರಿಗೆ ತೆಗೆದುಕೊಂಡು ಮಾರಾಟ ಮಾಡಿದರೆ ಹೆಚ್ಚಿನ ಬೆಲೆ ಸಿಗುತ್ತದೆ ಎಂದು ಮಾತನಾಡಿಕೊಂಡು ನಗರದ ಜಾಲಹಳ್ಳಿಗೆ ಬಂದು ಮಾರಾಟದಲ್ಲಿ ತೊಡಗಿಸಿಕೊಂಡಿದ್ದರು. ಈ ಕುರಿತ ಖಚಿತ ಮಾಹಿತಿ ಆಧರಿಸಿ ಪೊಲೀಸರು ದಾಳಿ ಮಾಡಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರಿಂದ ಮೂರು ತುಂಡು ಆನೆ ದಂತ ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.