ಕರ್ನಾಟಕ

karnataka

ETV Bharat / state

ವ್ಯಾಕ್ಸಿನ್ ಗೊಂದಲ ನಿವಾರಿಸಿ, 2ನೇ ಡೋಸ್ ಪಡೆಯುವವರಿಗೆ ಮೊದಲ ಆದ್ಯತೆ ನೀಡಿ​: ಬಿಎಸ್​​​ವೈ ಸೂಚನೆ

ಕೋವಿಡ್ ವ್ಯಾಕ್ಸಿನ್ ಬಗ್ಗೆ ಇರುವ ಗೊಂದಲ ಬಗೆಹರಿಸಿ ಸೆಕೆಂಡ್ ಡೋಸ್ ವ್ಯಾಕ್ಸಿನ್ ಪಡೆಯುವವರಿಗೆ ಮೊದಲ ಆದ್ಯತೆ ಕೊಡಬೇಕು ಎಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

BSY Notice
ಬಿಎಸ್​ವೈ ಸೂಚನೆ

By

Published : May 12, 2021, 7:43 PM IST

ಬೆಂಗಳೂರು: ಕೋವಿಡ್ ವ್ಯಾಕ್ಸಿನ್ ಬಗ್ಗೆ ಇರುವ ಗೊಂದಲ‌ವನ್ನು ಆದಷ್ಟು ಬೇಗ ನಿವಾರಿಸಬೇಕೆಂದು ಅಧಿಕಾರಿಗಳಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೂಚಿಸಿದ್ದಾರೆ.

ಅಧಿಕೃತ ನಿವಾಸ ಕಾವೇರಿಯಲ್ಲಿ ಕೋವಿಡ್ ಉಸ್ತುವಾರಿ ಸಚಿವರು ಹಾಗೂ ಹಿರಿಯ ಅಧಿಕಾರಿಗಳ ಜೊತೆ ಸಿಎಂ ಸಭೆ ನಡೆಸಿದರು. ರಾಜ್ಯದ ಕೋವಿಡ್ ಸ್ಥಿತಿಗತಿ, ಬೆಡ್ ಕೊರತೆ, ಐಸಿಯು ಸಮಸ್ಯೆ, ರೆಮ್ಡೆಸಿವಿರ್ ಲಭ್ಯತೆ, ಆಮ್ಲಜನಕ ಸರಬರಾಜು ಕುರಿತು ವಿಸ್ತೃತವಾದ ಚರ್ಚೆ ನಡೆಸಿದರು. ವಿಶೇಷವಾಗಿ ಕೋವಿಡ್ ಲಸಿಕೆ ಕುರಿತು ಸಮಾಲೋಚನೆ ನಡೆಸಿ ಮಾತನಾಡಿರುವ ಸಿಎಂ ಜಿಲ್ಲೆಗಳಲ್ಲಿ ಆಕ್ಸಿಜನ್ ಸಪ್ಲೆ ಚೈನ್‌ನಲ್ಲಿ ಯಾವುದೇ ವ್ಯತ್ಯಾಸ ಆಗದಂತೆ ನೋಡಿಕೊಳ್ಳಬೇಕು. ಆಕ್ಸಿಜನ್ ಸಿಲಿಂಡರ್ ಲಭ್ಯತೆ ಇದ್ದು, ಜಿಲ್ಲೆಗಳಲ್ಲಿ ಕೊರತೆ ಉಂಟಾದರೆ ಕೂಡಲೇ ಬಗೆಹರಿಸಬೇಕು. ಆಕ್ಸಿಜನ್ ಮತ್ತು ಐಸಿಯು ಬೆಡ್​ಗಳ ಸಂಖ್ಯೆ ಹೆಚ್ಚಿಸುವತ್ತ ಗಮನ ಹರಿಸಬೇಕು.

ಓದಿ:ಕೊರೊನಾ​ಗೆ ತಯಾರಾಯ್ತು ಇನ್ನೊಂದು ಅಸ್ತ್ರ.. ಕೊಲ್ಹಾಪುರ ಮೂಲದ ಕಂಪನಿ ತಯಾರಿಸಿದೆ 'ಆ್ಯಂಟಿಕೋವಿಡ್ ಸೀರಮ್'

ಸೆಕೆಂಡ್ ಡೋಸ್ ವ್ಯಾಕ್ಸಿನ್ ಪಡೆಯುವವರಿಗೆ ಮೊದಲ ಆದ್ಯತೆ ಕೊಡಬೇಕು. ಪ್ರತಿ ಜಿಲ್ಲೆಯ ವ್ಯಾಕ್ಸಿನ್ ಲಭ್ಯತೆ ಬಗ್ಗೆ ಅಧಿಕಾರಿಗಳ ಬಳಿ ಮಾಹಿತಿ ಇರಬೇಕು, ವ್ಯಾಕ್ಸಿನ್ ಪೂರೈಸುವ ಕಂಪನಿಗಳ ‌ಜೊತೆ ನಿರಂತರವಾಗಿ ಸಂಪರ್ಕ‌ ಇಟ್ಟುಕೊಳ್ಳಲು ಸೂಚನೆ ನೀಡಿದರು. ಸಭೆಯಲ್ಲಿ ಕೋವಿಡ್ ಜವಾಬ್ದಾರಿ ಹೊತ್ತ ಸಚಿವರಾದ ಡಾ.ಅಶ್ವತ್ಥನಾರಾಯಣ್, ಆರ್.ಅಶೋಕ್, ಜಗದೀಶ್ ಶೆಟ್ಟರ್, ಅರವಿಂದ ಲಿಂಬಾವಳಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್, ಡಿಜಿ - ಐಜಿಪಿ ಪ್ರವೀಣ್ ಸೂದ್ ಸೇರಿದಂತೆ ಹಿರಿಯ ಅಧಿಕಾರಿಗಳು, ಪಾಲಿಕೆ ಅಧಿಕಾರಿಗಳು ಭಾಗಿಯಾಗಿದ್ದರು.

ABOUT THE AUTHOR

...view details