ಕರ್ನಾಟಕ

karnataka

ETV Bharat / state

ಉದ್ಯೋಗ ನೀತಿಯಿಂದ ಯುವಕರ ಬದುಕು ಹಸನಾಗಲಿದೆ: ಸಿಎಂ ಬೊಮ್ಮಾಯಿ - Chief Minister Basavaraja Bommai drives for distribution of scholarships

ಕರ್ನಾಟಕ ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ಕಾರ್ಯಕ್ರಮದಿಂದ ಮಕ್ಕಳು ಉತ್ತಮ ಶಿಕ್ಷಣ ಪಡೆದು, ವಿವಿಧ ಉದ್ಯೋಗಳಲ್ಲಿ ತೊಡಗಿಕೊಂಡು ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದು ಸಿಎಂ ಹೇಳಿದ್ದಾರೆ.

CM
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

By

Published : Jan 20, 2022, 8:54 PM IST

ಬೆಂಗಳೂರು: ರಾಜ್ಯ ಉದ್ಯೋಗ ನೀತಿಯಿಂದ ಯುವಕರ ಬದುಕು ಹಸನಾಗಲಿದೆ. ಕೆಳಸ್ತರದ ದುಡಿಯುವ ವರ್ಗಕ್ಕೆ ಸಹಾಯಧನ ಬಹಳ ದೊಡ್ಡ ಆಸರೆಯಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ರೇಸ್ ಕೋರ್ಸ್ ರಸ್ತೆಯಲ್ಲಿರುವ ಅಧಿಕೃತ ನಿವಾಸ ರೇಸ್ ವ್ಯೂ ಕಾಟೇಜ್​​ನಲ್ಲಿ ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ವತಿಯಿಂದ ಕಟ್ಟಡ ಕಾರ್ಮಿಕರ ಮಕ್ಕಳಿಗೆ ಆನ್​ಲೈನ್ ಮೂಲಕ ವಿದ್ಯಾರ್ಥಿ ವೇತನ ವಿತರಣೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಉದ್ಯೋಗ ನೀತಿ ಯುವಕರಿಗೆ, ಉದ್ಯೋಗಾಕಾಂಕ್ಷಿಗಳಿಗೆ ಲಾಭದಾಯಕವಾಗಲಿದೆ. ಕಟ್ಟಡ ಕಾರ್ಮಿಕರ ಮಕ್ಕಳಿಗೆ ವಿದ್ಯಾರ್ಥಿವೇತನ ನೀಡುವ ಈ ಕಾರ್ಯಕ್ರಮದಿಂದ ಮಕ್ಕಳು ಉತ್ತಮ ಶಿಕ್ಷಣ ಪಡೆದು, ವಿವಿಧ ಉದ್ಯೋಗಳಲ್ಲಿ ತೊಡಗಿಕೊಂಡು ರಾಜ್ಯದ ಆರ್ಥಿಕತೆಯ ಅಭಿವೃದ್ಧಿಗೆ ಕೊಡುಗೆ ನೀಡುವಂತಾಗಬೇಕು ಎಂದರು.

ಇದನ್ನೂ ಓದಿ: ಚನ್ನವೀರ ಕಣವಿ ಅವರ ಆಸ್ಪತ್ರೆ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿದೆ: ಸಿಎಂ ಘೋಷಣೆ

ದೇಶದ ಆರ್ಥಿಕತೆಯನ್ನು ಮುನ್ನೆಡೆಸುವವರು ದುಡಿಯುವ ವರ್ಗವಾಗಿದೆ. ದೇವರು ರೈತರ ಶ್ರಮ ಹಾಗೂ ಕಾರ್ಮಿಕರ ಬೆವರಿನಲ್ಲಿದ್ದಾನೆ ಎಂದು ಕವಿ ರವೀಂದ್ರನಾಥ ಟ್ಯಾಗೋರ್ ಅವರು ತಿಳಿಸಿದಂತೆ ದುಡಿಯುವ ವರ್ಗವನ್ನು ದೈವತ್ವಕ್ಕೆ ಹೋಲಿಸುವ ಸಂಸ್ಕೃತಿ ಭಾರತ ದೇಶದಲ್ಲಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಸಮಾಜದಲ್ಲಿ ಕಾಯಕದ ನಿಷ್ಟೆ, ಜಾಗೃತಿ ಮೂಡಿಸುವುದು ಅವಶ್ಯಕವಾಗಿದೆ. ದೇಶದ ಜನ ಶ್ರೀಮಂತವಾಗಿದ್ದರೆ, ದೇಶ ಅಭಿವೃದ್ಧಿಯಾದಂತೆ. ರಾಜ್ಯದಲ್ಲಿ ದುಡಿಯುವ ವರ್ಗಕ್ಕೆ ಆರ್ಥಿಕ ಶಕ್ತಿಯನ್ನು ನೀಡಿದರೆ, ರಾಜ್ಯದ ಆರ್ಥಿಕ ಶಕ್ತಿ ವೃದ್ಧಿಸುತ್ತದೆ. ಕಟ್ಟಡ ಕಾರ್ಮಿಕರು, ವಲಸೆ ಬಂದಿರುವವರ ಮಕ್ಕಳ ಶಿಕ್ಷಣಕ್ಕೆ ಸಹಾಯ ಮಾಡುವುದು ಉತ್ತಮ ಕಾರ್ಯವಾಗಿದೆ ಎಂದು ಶ್ಲಾಘಿಸಿದರು.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ABOUT THE AUTHOR

...view details