ಕರ್ನಾಟಕ

karnataka

ಎಂಜಿನಿಯರಿಂಗ್ ವಿದ್ಯಾರ್ಥಿನಿ ನಿಗೂಢ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ: ಸಿಎಂ ಟ್ವೀಟ್

By

Published : Apr 19, 2019, 6:13 PM IST

ವಿದ್ಯಾರ್ಥಿನಿಯ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಹೆಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ರಾಯಚೂರಿನಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿ ಅನುಮಾನಾಸ್ಪದ ಸಾವಿನ ಪ್ರಕರಣ ನೋವು ತಂದಿದೆ. ವಿದ್ಯಾರ್ಥಿನಿಯ ಸಾವಿನ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸುವಂತೆ ಹಾಗೂ ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಸಿಎಂ ಟ್ವೀಟ್

ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಸಿಎಂ, ವಿದ್ಯಾರ್ಥಿನಿ ಸಾವು ಪ್ರಕರಣ ಅತೀವ ನೋವು ತಂದಿದೆ. ಆಕೆಯ ಹೆತ್ತವರಿಗೆ ಭಗವಂತ ಈ ನೋವು ಭರಿಸುವ ಶಕ್ತಿ ಕೊಡಲಿ ಎಂದು ಹೇಳಿ ಹೆಣ್ಣು ಮಕ್ಕಳ ಮೇಲಿನ ಇಂತಹ ಪೈಶಾಚಿಕ ಕೃತ್ಯವನ್ನು ಖಂಡಿಸಿದ್ದಾರೆ.

ಈ ಪ್ರಕರಣದ ಕುರಿತು ರಾಯಚೂರು ಎಸ್ ಪಿಯವರಿಂದ ಮಾಹಿತಿ ಪಡೆದಿದ್ದು, ಒಬ್ಬನನ್ನು ಬಂಧಿಸಿದ್ದಾರೆ. ಈ ಬಗ್ಗೆ ತನಿಖೆ ಮುಂದುವರಿದಿದೆ ಎಂದು ಟ್ವೀಟ್​​​ನಲ್ಲಿ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details