ಬೆಂಗಳೂರು:6ರಿಂದ 8ನೇ ತರಗತಿಯ 15 ಸಾವಿರ ಶಾಲಾ ಶಿಕ್ಷಕರ ನೇಮಕಕ್ಕೆ ಸೋಮವಾರ ಅಧಿಸೂಚನೆ ಹೊರಡಿಸಲಾಗಿತ್ತು. ಅದರಲ್ಲಿ ಶಿಕ್ಷಣ ಇಲಾಖೆ ಮಾರ್ಪಾಡು ತಂದಿದ್ದು, ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗಳ ಸಂಖ್ಯೆಯನ್ನು 250ರಿಂದ 557ಕ್ಕೆ ಹೆಚ್ಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಆಂಗ್ಲ ಭಾಷೆ ಶಿಕ್ಷಕರ ಹುದ್ದೆಗಳ ಹೆಚ್ಚಳದ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿರುವ ಶಿಕ್ಷಣ ಸಚಿವ ಬಿ.ಸಿ ನಾಗೇಶ್, 15,000 ಶಿಕ್ಷಕರ ನೇಮಕ ಸಂಬಂಧಿಸಿದಂತೆ ಕಲ್ಯಾಣ ಕರ್ನಾಟಕ ಭಾಗದ ವಿಷಯವಾರು ಹುದ್ದೆಗಳ ಮರು ಹಂಚಿಕೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.