ಬೆಂಗಳೂರು: ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಸಾವನ್ನಪ್ಪಿದ ಘಟನೆಯನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿಗಳು 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿದ್ದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ.
ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿದ ಮಕ್ಕಳ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಿದ ಸಿಎಂಗೆ ಖಂಡ್ರೆ ಅಭಿನಂದನೆ - ಸಿಎಂಗೆ ಖಂಡ್ರೆ ಅಭಿನಂದನೆ
ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಸಾವನ್ನಪ್ಪಿದ ಕುಟುಂಬಕ್ಕೆ ಮುಖ್ಯಮಂತ್ರಿಗಳು 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿರುವುದಕ್ಕೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ.
ಟ್ವೀಟ್ ಮೂಲಕ ಅಭಿನಂದನೆ ಸಲ್ಲಿಸಿರುವ ಅವರು, ಇತ್ತೀಚಿಗೆ ಭಾಲ್ಕಿ ತಾಲೂಕಿನ ಚಳಕಾಪುರ್ ವಾಡಿ ಗ್ರಾಮದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಧೂಳಪ್ಪ ಬನ್ನಾಳೆ ರವರ ಕುಟುಂಬದ ಮೂವರು ಮಕ್ಕಳು ಆಕಸ್ಮಿಕವಾಗಿ ಸಾವನ್ನಪ್ಪಿದ್ದರು. ಇದೊಂದು ವಿಶೇಷ ಪ್ರಕರಣ ಎಂದು ಪರಿಗಣಿಸಿ ಬಡ ಕುಟುಂಬಕ್ಕೆ ಪರಿಹಾರ ನೀಡುವಂತೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರಲ್ಲಿ ಮನವಿ ಮಾಡಿದ್ದೆ. ಇದಕ್ಕೆ ಸ್ಪಂದಿಸಿರುವ ಮುಖ್ಯಮಂತ್ರಿಗಳು 5 ಲಕ್ಷ ರೂಪಾಯಿ ಪರಿಹಾರ ಬಿಡುಗಡೆ ಮಾಡಿದ್ದಾರೆ. ಮೃತರ ಕುಟುಂಬದ ಪರವಾಗಿ ಹಾಗೂ ವೈಯಕ್ತಿಕವಾಗಿ ಮುಖ್ಯಮಂತ್ರಿಗಳಿಗೆ ಅಭಿನಂದಿಸುತ್ತೇನೆ ಎಂದಿದ್ದಾರೆ.
ಚಳಕಾಪುರ ವಾಡಿಯಲ್ಲಿ ಇತ್ತೀಚಿಗೆ ಕೃಷಿ ಹೊಂಡದಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಮಕ್ಕಳು ಮೃತಪಟ್ಟಿದ್ದರು. ಈಶ್ವರ ಖಂಡ್ರೆ ಮೃತರ ಕುಟುಂಬಕ್ಕೆ ವೈಯಕ್ತಿಕವಾಗಿ 1ಲಕ್ಷ ರೂ ಪರಿಹಾರ ನೀಡಿದ್ದರು. ಸರ್ಕಾರದ ವತಿಯಿಂದ 10 ಲಕ್ಷ ಪರಿಹಾರ ಕೊಡಿಸುವ ಭರವಸೆಯನ್ನು ಆ.13 ರಂದು ಕೊಟ್ಟಿದ್ದರು. ಆದರೆ ಈ ರೀತಿ ಸಾವನ್ನಪ್ಪಿದ ಪ್ರಕರಣಕ್ಕೆ ಪರಿಹಾರ ನೀಡುವ ಅವಕಾಶ ಇಲ್ಲದ ಕಾರಣ ಮುಖ್ಯಮಂತ್ರಿಗಳು ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಿದ್ದಾರೆ.