ಕರ್ನಾಟಕ

karnataka

ETV Bharat / state

5 ಲಕ್ಷ ದಾಟಿದ ಕೊರೊನಾ ಸೋಂಕು ; ಸರ್ಕಾರದ ನಿರ್ಲಕ್ಷ್ಯತನಕ್ಕೆ ಈಶ್ವರ ಖಂಡ್ರೆ ಕೆಂಡ - Corona latest news

ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎಂಬ ಗಾದೆಯಂತೆ ರಾಜ್ಯದ ಜನರ ಜೊತೆ ಸರ್ಕಾರ ಚೆಲ್ಲಾಟ ಆಡುತ್ತಿದೆ. ಬೆಂಗಳೂರು ನಗರದಲ್ಲಿ ದಿನವೂ ಸೋಂಕು ಹೆಚ್ಚಾಗುತ್ತಿದೆ, ಬೆಂಗಳೂರು ನಗರದಲ್ಲಿ ಕೋವಿಡ್ ನಿಯಂತ್ರಿಸಲು ನೇಮಕಗೊಂಡಿದ್ದ ಅಷ್ಟದಿಕ್ಪಾಲಕರು ಏನು ಮಾಡುತ್ತಿದ್ದಾರೆ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಜನರ ಸಂಕಷ್ಟ ಇವರಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ..

Eshwara Khandre Angry On State Govt
ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ

By

Published : Sep 19, 2020, 10:44 PM IST

Updated : Sep 19, 2020, 11:42 PM IST

ಬೆಂಗಳೂರು :ರಾಜ್ಯದಲ್ಲಿ ಮಾರಕ ಕೊರೊನಾ ಸೋಂಕಿತರ ಸಂಖ್ಯೆ 5 ಲಕ್ಷ ದಾಟಿದೆ. ಈ ವೈರಾಣುವಿಗೆ 7,800ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರೂ ಸರ್ಕಾರ ನಿರ್ಲಕ್ಷ್ಯತೆ ತಾಳಿ, ಮುಗ್ಧ ಜನರ ಜೀವದೊಂದಿಗೆ ಚೆಲ್ಲಾಟವಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ.

ಈ ಸಂಬಂಧ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವ ಅವರು, ಸಿನಿಮಾ ಮಂದಿರ, ಈಜುಕೊಳ ಹಾಗೂ ಶಾಲಾ-ಕಾಲೇಜು ಹೊರತುಪಡಿಸಿ ಉಳಿದೆಲ್ಲವನ್ನೂ ತೆರೆದಿರುವ ಸರ್ಕಾರ ರಾಜ್ಯದಲ್ಲಿ ಕೊರೊನಾ ನಿಯಂತ್ರಣಕ್ಕೆ ಗಮನವನ್ನೇ ಹರಿಸುತ್ತಿಲ್ಲ. ಜನ ಸೂಕ್ತ ಚಿಕಿತ್ಸೆ ಸಿಗದೆ, ಸೋಂಕಿನಿಂದ ಸಾಯುತ್ತಿದ್ದರೂ ಸಂಪುಟ ವಿಸ್ತರಣೆ ಮಾಡಲು ಮುಖ್ಯಮಂತ್ರಿ ದೆಹಲಿಯನ್ನು ಎಡತಾಕುತ್ತಿದ್ದಾರೆ ಎಂದು ಟೀಕಿಸಿದ್ದಾರೆ.

ಶಾಲೆ ಆರಂಭಿಸುವುದು ಸರಿಯಲ್ಲ :ನಿನ್ನೆ ಒಂದೇ ದಿನ ರಾಜ್ಯದಲ್ಲಿ ದಾಖಲೆಯ 179 ರೋಗಿಗಳು ಕೊರೊನಾಗೆ ಬಲಿಯಾಗಿದ್ದಾರೆ. ವಾಟ್ಸ್ಆ್ಯಪ್, ಫೇಸ್‌ಬುಕ್​ಗಳ ತುಂಬಾ ಬರೀ ಸಾವಿನ ಸುದ್ದಿಗಳೇ ಬರುತ್ತಿವೆ. ಈ ಹಂತದಲ್ಲಿ ಶಾಲಾ-ಕಾಲೇಜು ತೆರೆಯುವ ಚಿಂತನೆ ನಡೆಸಿದ್ದಾರೆ. ಮಕ್ಕಳ ಭವಿಷ್ಯದ ಜೊತೆ ಸರ್ಕಾರ ಹುಡುಗಾಟ ಮಾಡುತ್ತಿದೆ. ರಾಜ್ಯದಲ್ಲಿ ಕಳೆದ ಏಪ್ರಿಲ್​ನಿಂದ ಈಚೆಗೆ ಮೃತಪಡುತ್ತಿರುವವರ ಸಂಖ್ಯೆಯಲ್ಲಿ ವಿಪರೀತ ಹೆಚ್ಚಳವಾಗಿದೆ. ಆದರೆ, ಸರ್ಕಾರ ಏನೂ ಆಗಿಯೇ ಇಲ್ಲ ಎಂಬಂತೆ ಜಾಣ ಕುರುಡುತನ, ಕಿವುಡುತನ ಪ್ರದರ್ಶಿಸುತ್ತಿದೆ. ಇಷ್ಟು ಜನ ವಿರೋಧಿ ಸರ್ಕಾರವನ್ನು ಹಿಂದೆಂದೂ ಕಂಡಿರಲಿಲ್ಲ ಎಂದು ಹೇಳಿದ್ದಾರೆ.

ಬೆಕ್ಕಿಗೆ ಚೆಲ್ಲಾಟ ಇಲಿಗೆ ಪ್ರಾಣ ಸಂಕಟ ಎಂಬ ಗಾದೆಯಂತೆ ರಾಜ್ಯದ ಜನರ ಜೊತೆ ಸರ್ಕಾರ ಚೆಲ್ಲಾಟ ಆಡುತ್ತಿದೆ. ಬೆಂಗಳೂರು ನಗರದಲ್ಲಿ ದಿನವೂ ಸೋಂಕು ಹೆಚ್ಚಾಗುತ್ತಿದೆ, ಬೆಂಗಳೂರು ನಗರದಲ್ಲಿ ಕೋವಿಡ್ ನಿಯಂತ್ರಿಸಲು ನೇಮಕಗೊಂಡಿದ್ದ ಅಷ್ಟದಿಕ್ಪಾಲಕರು ಏನು ಮಾಡುತ್ತಿದ್ದಾರೆ? ಆರೋಗ್ಯ ಇಲಾಖೆ ಏನು ಮಾಡುತ್ತಿದೆ? ಜನರ ಸಂಕಷ್ಟ ಇವರಿಗೆ ಕಾಣುತ್ತಿಲ್ಲವೇ ಎಂದು ಪ್ರಶ್ನಿಸಿದ್ದಾರೆ.

ಸರ್ಕಾರ ಸಂಪೂರ್ಣ ಕೈಚೆಲ್ಲಿ ಕುಳಿತಿದೆ. ಈ ಹಿನ್ನೆಲೆ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಎರಡು ಅಡಿ ಅಂತರ ಪಾಲಿಸುವ ಮೂಲಕ ಮತ್ತು ತಮ್ಮ ಕೈಗಳನ್ನು ಆಗಾಗ ಸಾಬೂನಿನಿಂದ ತೊಳೆದು ಶುಚಿಗೊಳಿಸಿ ಕೊಳ್ಳುವ ಮೂಲಕ ತಮ್ಮ ಆರೋಗ್ಯ ಕಾಪಾಡಿಕೊಳ್ಳುವಂತೆ ಮನವಿ ಮಾಡಿದ್ದಾರೆ.

Last Updated : Sep 19, 2020, 11:42 PM IST

ABOUT THE AUTHOR

...view details