ಬೆಂಗಳೂರು:ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಸೂಚಿಸಿದ್ದಾರೆ.
ಶಿವಮೊಗ್ಗ ಸ್ಮಾರ್ಟ್ಸಿಟಿ ಯೋಜನೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಲು ಈಶ್ವರಪ್ಪ ಸೂಚನೆ ವಿಧಾನಸಭೆಯಲ್ಲಿಂದು ಬೆಳಗ್ಗೆ ತಮ್ಮ ಅಧ್ಯಕ್ಷತೆಯಲ್ಲಿ ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆ ಕುರಿತು ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಸಭೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಲಾಯಿತು. ಅಪೂರ್ಣ ಕಾಮಗಾರಿಗಳನ್ನು ಶೀಘ್ರದಲ್ಲಿ ಮುಗಿಸುವ ಕುರಿತು ಸಮಾಲೋಚಿಸಿ, ಸ್ಮಾರ್ಟ್ ಸಿಟಿಗೆ ಸಂಬಂಧಿಸಿದಂತೆ ಅವಶ್ಯಕತೆ ಹಾಗೂ ಖಾಲಿ ಇರುವ ಹುದ್ದೆಗಳಿಗೆ ಅಧಿಕಾರಿಗಳನ್ನು ನೇಮಿಸಿಕೊಂಡು ಆದಷ್ಟು ಬೇಗ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸಭೆಯಲ್ಲಿ ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ರಾಜೀವ್ಗಾಂಧಿ ಹೌಸಿಂಗ್ ಕಾರ್ಪೋರೇಶನ್ ವತಿಯಿಂದ ಬಾಕಿ ಉಳಿದಿದ್ದ ಗೋವಿಂದಪುರ ಮತ್ತು ಗೋಪಿಶೆಟ್ಟಿ ಗ್ರಾಮಗಳಲ್ಲಿ ಮನೆಗಳ ನಿರ್ಮಾಣಕ್ಕೆ ಶೀಘ್ರದಲ್ಲಿ ಟೆಂಡರ್ ಕರೆದು ಕಾಮಗಾರಿ ಪ್ರಾರಂಭಿಸಲು ಕ್ರಮ ಜರುಗಿಸುವಂತೆ ತಿಳಿಸಿದರು. ಈ ಯೋಜನೆಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತಗಲುವ ವೆಚ್ಚವನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯಿಂದ ಭರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.
ಸಭೆಯಲ್ಲಿ ಪೌರಾಡಳಿತ ಇಲಾಖೆಯ ನಿರ್ದೇಶಕರಾದ ಶೇಖರಪ್ಪ, ನಗರಾಭಿವೃದ್ಧಿ ಇಲಾಖೆಯ ಅಂಜುಮ ಪರ್ವೆಜ್, ಶಿವಮೊಗ್ಗ ಉಸ್ತುವಾರಿ ಕಾರ್ಯದರ್ಶಿ ಎಂ. ಮಣಿವಣ್ಣನ್, ಸ್ಮಾರ್ಟ್ ಸಿಟಿ ವ್ಯವಸ್ಥಾಪಕ ನಿರ್ದೇಶಕ ಚಿದಾನಂದ ವಟಾರೆ, ಜಿಲ್ಲಾಧಿಕಾರಿ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.