ಬೆಂಗಳೂರು:ಕೋವಿಡ್ ಲಸಿಕೆಯನ್ನು ಆಧಾರ್ ದೃಢೀಕರಣದೊಂದಿಗೆ ಪಡೆಯಬೇಕಾಗಿದ್ದು ಗ್ರಾಮೀಣ ಪ್ರದೇಶಗಳಲ್ಲಿ ಮೊದಲ ಹಂತದಲ್ಲಿ 630 ಆಧಾರ್ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಸಂಬಂಧ ಗ್ರಾಮೀಣಾಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ.
ಸಾರ್ವಜನಿಕರು ಕೋವಿಡ್-19 ಲಸಿಕೆಯನ್ನು, ಆಧಾರ್ ದೃಢೀಕರಣದೊಂದಿಗೆ ಪಡೆಯಬೇಕಾಗಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿರುವ ನಿವಾಸಿಗಳು ಮೊಬೈಲ್ ಸಂಖ್ಯೆಯನ್ನು ಆಧಾರ್ಗೆ ಅಪ್ಡೇಟ್ ಮಾಡಲು ಹೆಚ್ಚಿನ ಬೇಡಿಕೆ ಇದೆ. ಈ ನಿಟ್ಟಿನಲ್ಲಿ, ಗ್ರಾಮೀಣ ಪ್ರದೇಶದಲ್ಲಿನ ನಿವಾಸಿಗಳು ಆಧಾರ್ನಲ್ಲಿ ಮೊಬೈಲ್ ನಂಬರ್ ಅಪ್ಡೇಟ್ ಮಾಡಲು ಗ್ರಾಮ ಪಂಚಾಯಿತಿಗಳಲ್ಲಿ ಆಧಾರ್ ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲು ನಿರ್ಧರಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆ 630 ಟ್ಯಾಬ್ಲೆಟ್ಗಳನ್ನು ರಾಜ್ಯದ 28 ಜಿಲ್ಲಾ ಪಂಚಾಯತಿಗಳ 22 ಗ್ರಾಮ ಪಂಚಾಯತಿಗಳಿಗೆ ಒದಗಿಸಿ, ಗ್ರಾಮೀಣ ಪ್ರದೇಶದಲ್ಲಿನ ನಿವಾಸಿಗಳ ಆಧಾರ್ನಲ್ಲಿ ಮೊಬೈಲ್ ನಂಬರ್ ಅಪ್ಡೇಟ್ ಮಾಡುವ ಸಲುವಾಗಿ ಆಧಾರ್ ತಿದ್ದುಪಡಿ ಮತ್ತು ನೋಂದಣಿ ಕೇಂದ್ರಗಳನ್ನು ಸ್ಥಾಪಿಸಲು ಉದ್ದೇಶಿಸಿದೆ.
ಆಧಾರ್ನಲ್ಲಿ ಮೊಬೈಲ್ ಸಂಖ್ಯೆ ಅಪ್ಡೇಟ್ ಮಾಡಲು ಸಾರ್ವಜನಿಕರಿಂದ 50 ರೂ. ಶುಲ್ಕ ವಿಧಿಸಬೇಕು. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳ ಆಧಾರ್ ನೋಂದಣಿ ಮಾಡಲು ಸಾರ್ವಜನಿಕರಿಂದ ಯಾವುದೇ ಶುಲ್ಕ ವಿಧಿಸುವಂತಿಲ್ಲ ಎಂದು ಸೂಚಿಸಿದೆ.
ಇದನ್ನೂ ಓದಿ:ಭ್ರಷ್ಟಾಚಾರ ಆರೋಪದಡಿ ಪ್ರಕರಣ ದಾಖಲಿಸುವಂತೆ ಕೋರಿದ್ದ ಅರ್ಜಿ ವಜಾ: ಸಿಎಂ ಬಿಎಸ್ವೈಗೆ ಬಿಗ್ ರಿಲೀಫ್