ಬೆಂಗಳೂರು: ಸರ್ಕಾರದ ಅನುಮತಿ ಪಡೆಯದೇ ರಾಜ್ಯಾದ್ಯಂತ ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕ ಸ್ಥಾಪಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ 10 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿದೆ.
ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕ ಸ್ಥಾಪನೆ: ಹೈಕೋರ್ಟ್ನಿಂದ ಸರ್ಕಾರಕ್ಕೆ ನೋಟಿಸ್ - undefined
ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕ ಸ್ಥಾಪನೆ ವಿರುದ್ಧ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್. 10 ದಿನದೊಳಗೆ ಆಕ್ಷೇಪಣೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ.

ಹೈ ಕೋರ್ಟ್
ಈ ಕುರಿತು ಹುಬ್ಬಳ್ಳಿಯ ನಿವಾಸಿ ಲೋಚನೇಶ್ ಬಿ. ಹೂಗಾರ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ್ ಮತ್ತು ನ್ಯಾಯಮೂರ್ತಿ ಹೆಚ್.ಟಿ.ನರೇಂದ್ರಪ್ರಸಾದ್ ಅವರಿದ್ದ ವಿಭಾಗೀಯ ನ್ಯಾಯ ಪೀಠದಲ್ಲಿ ನಡೆಯಿತು.
ರಾಜ್ಯಾದ್ಯಂತ ಸರ್ಕಾರದಿಂದ ಅನುಮತಿ ಪಡೆಯದೆ ಅನಧಿಕೃತವಾಗಿ ನೀರು ಶುದ್ಧೀಕರಣ ಘಟಕಗಳನ್ನು ತೆರೆದಿರುವುದು ಅಕ್ರಮ ಎಂದುಅರ್ಜಿದಾರರ ಪರ ವಕೀಲರುವಾದ ಮಂಡಿಸಿದರು. ವಕೀಲರ ವಾದ ಆಲಿಸಿದ ನ್ಯಾಯಪೀಠವು, ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿ 10 ದಿನದೊಳಗೆ ಆಕ್ಷೇಪಣೆ ಸಲ್ಲಿಸಲು ಸೂಚಿಸಿ, ವಿಚಾರಣೆಯನ್ನು ಜು.23ಕ್ಕೆ ಮುಂದೂಡಿದೆ.