ಬೆಂಗಳೂರು : ರಾಜ್ಯ ಸರ್ಕಾರ ಪ್ರಾಯೋಜಿತ ನಾಲ್ಕು ಆಹಾರ ಪಾರ್ಕ್ಗಳನ್ನು ಯಶಸ್ವಿಗೊಳಿಸಲು 'ಪರಿಣಾಮ ಮೌಲ್ಯಮಾಪನ' ಮಾಡುವಂತೆ ಸಿಎಂ ಬಸವರಾಜ ಬೊಮ್ಮಾಯಿ ಸೂಚಿಸಿದ್ದಾರೆ.
ಆಹಾರ ಕರ್ನಾಟಕ ನಿಯಮಿತದ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಗಲಕೋಟೆ, ಹಿರಿಯೂರು, ಮಾಲೂರು ಮತ್ತು ಜೇವರ್ಗಿಯಲ್ಲಿರುವ ಫುಡ್ ಪಾರ್ಕಗ್ಗಳಿಗೆ ಸಂಬಂಧಿಸಿದಂತೆ ಭೂಮಿ, ಈಕ್ವಿಟಿ, ಮೂಲಸೌಕರ್ಯಗಳನ್ನು ಪರಿಶೀಲಿಸಬೇಕು.
ಫುಡ್ ಪಾರ್ಕ್ಗಳನ್ನು ಆರಂಭಿಸಲು ಕೋರಿರುವ 26 ಕೋಟಿ ರೂ.ಗಳ ಅನುದಾನ ಒದಗಿಸುವ ಬಗ್ಗೆ ಆರ್ಥಿಕ ಇಲಾಖೆ ಪರಿಶೀಲನೆಯ ನಂತರ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದ್ದಾರೆ.