ಕರ್ನಾಟಕ

karnataka

ETV Bharat / state

ಅಮಿತ್​ ಶಾ ಮೆಚ್ಚಿಸಲು ರಾಜ್ಯ ಸರ್ಕಾರ ಅಮಾಯಕರ ಮೇಲೆ ಗುಂಡು ಸಿಡಿಸಿತೆ?: ಕುಮಾರಸ್ವಾಮಿ ಪ್ರಶ್ನೆ - ಮಂಗಳೂರು ಗುಂಡಿನ ದಾಳಿ ಖಂಡಿಸಿ ಕುಮಾರಸ್ವಾಮಿ ಟ್ವೀಟ್​

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಯಾರೂ ಪ್ರತಿಭಟಿಸಲೇಬಾರದೆ? 4 ತಿಂಗಳ ಆಡಳಿತ ಅವಧಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ 'ಪವಿತ್ರ ಸರ್ಕಾರ'ವು ಮಾಡಲು ಹೊರಟಿರುವುದು ಏನು? ಎಂದು ಹೆಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

Kumaraswamy tweet against state government, ಮಂಗಳೂರು ಗುಂಡಿನ ದಾಳಿ ಖಂಡಿಸಿ ಕುಮಾರಸ್ವಾಮಿ ಟ್ವೀಟ್
ಕುಮಾರಸ್ವಾಮಿ

By

Published : Dec 20, 2019, 3:32 AM IST

ಬೆಂಗಳೂರು:ಪೊಲೀಸರ ಗುಂಡಿಗೆ ಬಲಿಯಾದ ಮಂಗಳೂರಿನ ಅಮಾಯಕರ ಕುಟುಂಬದ ಜವಾಬ್ದಾರಿ ಹೊರುವವರು ಯಾರು? ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಯಾರೂ ಪ್ರತಿಭಟಿಸಲೇಬಾರದೆ? 4 ತಿಂಗಳ ಆಡಳಿತ ಅವಧಿಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ನೇತೃತ್ವದ 'ಪವಿತ್ರ ಸರ್ಕಾರ'ವು ಮಾಡಲು ಹೊರಟಿರುವುದು ಏನು? ಎಂದು ಟೀಕಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಅಸ್ಸೋಂನಲ್ಲಿ ಮೊದಲು ತೀವ್ರತರವಾದ ಪ್ರತಿಭಟನೆ ಆಕ್ರೋಶ, ಭುಗಿಲೆದ್ದಿತು. ಆದರೆ ಅಲ್ಲಿ ನಡೆಯದ ಗೋಲಿಬಾರ್ ಶಾಂತಿಯುತ ಪ್ರತಿಭಟನೆ ನಡೆಯುತ್ತಿದ್ದ ರಾಜ್ಯದಲ್ಲಿ ನಡೆದಿದ್ದಾದರೂ ಯಾಕೆ? ಅಮಾಯಕರ 'ರಕ್ತ ತರ್ಪಣ' ಕೊಡುವ ಮೂಲಕ ಯಾರಿಗೆ ಯಾವ ಸಂದೇಶ ರವಾನಿಸಿದಿರಿ? ಎಂದು ಪ್ರಶ್ನಿಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಮೆಚ್ಚಿಸಲು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಸರ್ಕಾರ ಅಮಾಯಕರ ಮೇಲೆ ಗುಂಡು ಸಿಡಿಸಿತೆ? ಅಧಿಕಾರಿಗಳು ತಾವಾಗಿಯೇ ಶಾಂತಿಯುತ ಪ್ರತಿಭಟನೆ ತಹಬದಿಗೆ ತರಲು ಅವಿವೇಕದ ನಿರ್ಧಾರ ಕೈಗೊಂಡರೋ? ರಾಜ್ಯ ಸರ್ಕಾರ ಶೌರ್ಯ ಪ್ರದರ್ಶನಕ್ಕೆ ಇಂತಹ ಆದೇಶ ನೀಡಿತೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details