ಕರ್ನಾಟಕ

karnataka

ETV Bharat / state

ಕೃಷಿ ಕಾಯ್ದೆಗಳನ್ನು ಸರ್ಕಾರ ಪುನರ್ ಪರಿಶೀಲನೆ ಮಾಡಲಿ; ಹೆಚ್​ಡಿಕೆ ಒತ್ತಾಯ - ರೈತರ ಹೋರಾಟದ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್​

ರೈತ ಕ್ರಾಂತಿಯ ಹೋರಾಟದ ಕಿಚ್ಚಿಗೆ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅದಕ್ಕೆ ರೈತರು ಬಲಿಯಾಗಬಾರದು ಎಂಬುದು ನನ್ನ ಕಿವಿಮಾತು. ಸಂಕಷ್ಟಕ್ಕೆ ಸಿಲುಕಿದ ರೈತರ ಕ್ರಾಂತಿಯ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ ಎಂದು ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ ಟ್ವೀಟ್​ ಮಾಡಿದ್ದಾರೆ.

ex cm kumarswamy orders to recheck agriculture bills
ಹೆಚ್​ಡಿಕೆ ಒತ್ತಾಯ

By

Published : Jan 25, 2021, 6:59 PM IST

ಬೆಂಗಳೂರು: ಕೇಂದ್ರ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಕೃಷಿ ಕಾಯ್ದೆಗಳನ್ನು ಪುನರ್ ಪರಿಶೀಲನೆ ನಡೆಸಬೇಕು. ಸರ್ಕಾರ ಹಠಮಾರಿ ಧೋರಣೆ ಕೈಬಿಟ್ಟು ರೈತರಿಗೆ ಕಾಯ್ದೆಗಳ ಬಗ್ಗೆ ಮನವರಿಕೆ ಮಾಡಿಕೊಡುವ ಜವಾಬ್ದಾರಿಯನ್ನು ತೋರಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ರೈತರ ಸಮಸ್ಯೆಗಳ ಪರಿಹಾರಕ್ಕೆ ನಡೆಯುವ ಹೋರಾಟಕ್ಕೆ ಜೆಡಿಎಸ್ ಸದಾ ಬೆಂಬಲ ನೀಡುತ್ತಿದೆ. ರೈತರ ಅಭ್ಯುದಯಕ್ಕಾಗಿ ದುಡಿದ ಮತ್ತು ದುಡಿಯುವ ಏಕೈಕ ಪಕ್ಷವೆಂದರೆ ಅದು ಜೆಡಿಎಸ್. ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುವುದು ಎಲ್ಲರ ಹಕ್ಕು. ರಾಜ್ಯದಲ್ಲಿ ರೈತರ ಪ್ರತಿಭಟನೆಯನ್ನು ಹತ್ತಿಕ್ಕಲು ಮುಂದಾದರೆ ಅದಕ್ಕೆ ತಕ್ಕ ಪಾಠ ಕಲಿಯಬೇಕಾಗುತ್ತದೆ. ರೈತರ ಶಾಂತಿಯುತ ಪ್ರತಿಭಟನೆಗೆ ರಾಜ್ಯ ಸರ್ಕಾರ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ರೈತ ಕ್ರಾಂತಿಯ ಹೋರಾಟದ ಕಿಚ್ಚಿಗೆ ಕೆಲವು ಪಕ್ಷಗಳು ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಪ್ರಯತ್ನಿಸುತ್ತಿವೆ. ಅದಕ್ಕೆ ರೈತರು ಬಲಿಯಾಗಬಾರದು ಎಂಬುದು ನನ್ನ ಕಿವಿಮಾತು. ಸಂಕಷ್ಟಕ್ಕೆ ಸಿಲುಕಿದ ರೈತರ ಕ್ರಾಂತಿಯ ಹೋರಾಟಕ್ಕೆ ನಮ್ಮ ಬೆಂಬಲ ಸದಾ ಇದ್ದೇ ಇರುತ್ತದೆ. ರೈತ ಕ್ರಾಂತಿಯನ್ನು ಹಾದಿ ತಪ್ಪಿಸುವ ಹುನ್ನಾರಗಳಿಗೆ ಮಣಿಯದಿದ್ದರೆ ನೈಜ ಕಳಕಳಿಯ ಹೋರಾಟ ತಾರ್ಕಿಕ ಅಂತ್ಯ ಕಂಡು ಗೆಲುವು ಆಗುತ್ತದೆ ಎಂಬುದು ಪ್ರಾಮಾಣಿಕ ಅನಿಸಿಕೆ ಎಂದು ಟ್ವೀಟ್​​ ಮಾಡಿದ್ದಾರೆ.

ಇದನ್ನೂ ಓದಿ:ತುಮಕೂರು: ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದ ಟ್ರ್ಯಾಕ್ಟರ್ ತಡೆದ ಪೊಲೀಸರು

For All Latest Updates

ABOUT THE AUTHOR

...view details