ಕರ್ನಾಟಕ

karnataka

ETV Bharat / state

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಮನೆಗೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ - hd kumaraswamy latest news updates

ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದು ಟ್ವೀಟ್ ಮಾಡಿದ್ದಾರೆ..

kumarswamy
kumarswamy

By

Published : Apr 24, 2021, 2:57 PM IST

ಬೆಂಗಳೂರು: ಕೊರೊನಾ ಸೋಂಕಿನಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಗುಣಮುಖರಾಗಿ ಮನೆಗೆ ಮರಳಿದ್ದಾರೆ.

ಬನ್ನೇರುಘಟ್ಟ ರಸ್ತೆಯಲ್ಲಿರುವ ಅಪೊಲೊ ಆಸ್ಪತ್ರೆಯಲ್ಲಿ ಕೆಲದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಕುಮಾರಸ್ವಾಮಿ, ಇಂದು ಮಧ್ಯಾಹ್ನ ಡಿಸ್ಚಾರ್ಜ್​ ಆಗಿ ಮನೆಗೆ ತೆರಳಿದ್ದಾರೆ.

ನಿಮ್ಮೆಲ್ಲರ ಪ್ರೀತಿ, ಅಕ್ಕರೆ, ಪ್ರಾರ್ಥನೆಯ ಫಲವಾಗಿ ನಾನು ಇಂದು ಕೊರೊನಾ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಮನೆಗೆ ಬಂದಿದ್ದೇನೆ. ನಿಮ್ಮೆಲ್ಲರ ಪ್ರೀತಿಯ ಕಾಳಜಿಗೆ ನನ್ನ ಪ್ರಣಾಮಗಳು ಎಂದು ಟ್ವೀಟ್ ಮಾಡಿದ್ದಾರೆ.

ಸಾರ್ವಜನಿಕರನ್ನು ಭೇಟಿ ಮಾಡುವುದಿಲ್ಲ :ಇನ್ನೂ ಎರಡು ವಾರಗಳ ಕಾಲ ವೈದ್ಯರ ಸಲಹೆ ಮೇರೆಗೆ ಸಾರ್ವಜನಿಕರನ್ನು ಭೇಟಿ ಮಾಡಲು ಸಾಧ್ಯವಿಲ್ಲ. ದಯಮಾಡಿ ಸಹಕರಿಸಿ. ನಿಮ್ಮ ಪ್ರೀತಿಯ ಋಣಭಾರ ನನ್ನ ಮೇಲೆ ಸದಾ ಹೀಗೆ ಇರಲಿ ಎಂದು ಮನವಿ ಮಾಡಿದ್ದಾರೆ.

ABOUT THE AUTHOR

...view details