ಕರ್ನಾಟಕ

karnataka

ETV Bharat / state

ಲೆಕ್ಕಕೊಡಿ ಅಭಿಯಾನದಡಿ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸಿದ್ದರಾಮಯ್ಯ - ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್

ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೊರೊನಾ ಸಂಬಂಧಿಸಿದ ಆರೋಪ ಬಂದಾಗೆಲ್ಲ ‘ದಾಖಲೆ ನೀಡಿ’, ‘ವಿಧಾನಸೌಧಕ್ಕೆ ಬನ್ನಿ’ ಎಂದೆಲ್ಲ ಸವಾಲು ಹಾಕಿ ಕೆಲವು ಸಚಿವರು ವಿಷಯಾಂತರ ಮಾಡುತ್ತಿದ್ದಾರೆ. ಸರ್ಕಾರ ಅರೆಬರೆ ಮಾಹಿತಿ ನೀಡಿ ತಪ್ಪಿಸಿಕೊಳ್ಳುತ್ತಿದೆ. ಈ ಬಗ್ಗೆ ಬಿ.ಎಸ್. ಯಡಿಯೂರಪ್ಪ ಅವರಿಗೆ ನಿರ್ದಿಷ್ಠ ವಿವರ ಕೇಳಿ ಪತ್ರ ಬರೆದಿದ್ದೇನೆ ಎಂದಿದ್ದಾರೆ.

ex-cm-siddaramaiah-demanding-for-records-about-covid
ತರಾಟೆ ತೆಗೆದುಕೊಂಡ ಸಿದ್ದರಾಮಯ್ಯ

By

Published : Jul 15, 2020, 3:42 AM IST

Updated : Jul 15, 2020, 7:01 AM IST

ಬೆಂಗಳೂರು:ಲೆಕ್ಕಕೊಡಿ ಅಭಿಯಾನದಡಿ ಸಾಮಾಜಿಕ ಜಾಲತಾಣ ಮೂಲಕ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಳ್ಳುತ್ತಿರುವ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಮುಖ್ಯಮಂತ್ರಿ ಬಿ.ಎಸ್​. ಯಡಿಯೂರಪ್ಪ ವಿರುದ್ಧ ಮುಗಿಬಿದ್ದಿದ್ದಾರೆ.

ಟ್ವೀಟ್ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕಿರುವ ಸಿದ್ದರಾಮಯ್ಯ, ಕೊರೊನಾ ಸಂಬಂಧಿಸಿದ ಆರೋಪ ಬಂದಾಗೆಲ್ಲ ‘ದಾಖಲೆ ನೀಡಿ’, ‘ವಿಧಾನಸೌಧಕ್ಕೆ ಬನ್ನಿ’ ಎಂದೆಲ್ಲ ಸವಾಲು ಹಾಕಿ ಕೆಲವು ಸಚಿವರು ವಿಷಯಾಂತರ ಮಾಡುತ್ತಿದ್ದಾರೆ. ಸರ್ಕಾರ ಅರೆಬರೆ ಮಾಹಿತಿ ನೀಡಿ ತಪ್ಪಿಸಿಕೊಳ್ಳುತ್ತಿದೆ. ಈ ಬಗ್ಗೆ ಬಿ.ಎಸ್. ಯಡಿಯೂರಪ್ಪ ಅವರಿಗೆ ನಿರ್ದಿಷ್ಠ ವಿವರ ಕೇಳಿ ಪತ್ರ ಬರೆದಿದ್ದೇನೆ ಎಂದಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಎಷ್ಟು ಪ್ರಮಾಣದ ಸಾಮಗ್ರಿ ಖರೀದಿಸಲಾಗಿದೆ? ಪ್ರತಿ ಸಾಮಗ್ರಿಯ ಬೆಲೆಯೆಷ್ಟು? ಬಿಡ್/ಕೊಟೇಷನ್ ಮೂಲಕ ಪಾಲ್ಗೊಂಡ ಸಂಸ್ಥೆಗಳು ಯಾವುವು? ಸರಬರಾಜು ಆದೇಶ ಪಡೆದುಕೊಂಡ ಸಂಸ್ಥೆ ಯಾವುದು? ಹೆಚ್ಚುದರ ಕೋಟ್ ಮಾಡಿದ ಕಂಪನಿಗೆ ಸರಬರಾಜು ಆದೇಶ ನೀಡಿರುವ ಪ್ರಕರಣಗಳೆಷ್ಟು? ಕಾರಣಗಳೇನು? ಎಂಬುದು ನಮ್ಮ ಪ್ರಶ್ನೆಯಾಗಿದೆ ಎಂದು ವಿವರಿಸಿದ್ದಾರೆ.

ಕೊರೊನಾ ನಿಯಂತ್ರಣ ಸಾಮಗ್ರಿಗಳ ಗುಣಮಟ್ಟದ ಬಗ್ಗೆ ತಕರಾರುಗಳಿದ್ದರೂ ಪಾವತಿ ಮಾಡಲಾದ ಹಣ ಎಷ್ಟು? ಕೇಂದ್ರ ಸರ್ಕಾರ ಖರೀದಿ ಮಾಡಿದ ಸಾಮಗ್ರಿಗಳು ಯಾವುವು? ಅವುಗಳಲ್ಲಿ ಕಳಪೆಯಾಗಿದೆ ಎಂದು ಬಂದ ದೂರುಗಳೆಷ್ಟು? ಆ ದೂರುಗಳ ಕುರಿತು ಕೈಗೊಂಡಿರುವ ಕ್ರಮಗಳೇನು? ಕೇಂದ್ರ ಮತ್ತು ರಾಜ್ಯ ಸರ್ಕಾರ ಖರೀದಿಸಿದ ಸಾಮಗ್ರಿಗಳನ್ನು ಎಲ್ಲೆಲ್ಲಿ ಮತ್ತು ಎಷ್ಟು ಪ್ರಮಾಣದಲ್ಲಿ ವಿತರಿಸಲಾಗಿದೆ? ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಅನುದಾನ ಎಷ್ಟು? ಅದರಲ್ಲಿ ಖರ್ಚು ಮಾಡಲಾದ ಅನುದಾನ ಎಷ್ಟು? ರಾಜ್ಯ ಸರ್ಕಾರ ಬಿಡುಗಡೆ ಮಾಡಿದ ಅನುದಾನ ಎಷ್ಟು? ಖರ್ಚಾಗಿರುವುದು ಎಷ್ಟು? ಎಂಬ ಪ್ರಶ್ನೆಗಳ ಸುರಿಮಳೆಗೈದಿದ್ದಾರೆ.

ಪ್ರಮಾಣ ವಿವರಿಸಿ:

ಕೊರೊನಾ ನಿಯಂತ್ರಣ ಸಾಮಗ್ರಿ ಸರಬರಾಜು ಆದೇಶ ಪಡೆದ ಕಂಪನಿ ಸರಬರಾಜು ಮಾಡಿದ ಉತ್ಪನ್ನಗಳ ಪ್ರಮಾಣ ಎಷ್ಟು? ಗುಣಮಟ್ಟ ಸರಿಯಿಲ್ಲದ ಕಾರಣಕ್ಕೆ ತಿರಸ್ಕರಿಸಲ್ಪಟ್ಟ ಸಾಮಗ್ರಿಗಳು ಯಾವುವು? ಕಳಪೆ ಸಾಮಗ್ರಿ ಸರಬರಾಜು ಮಾಡಿದ ಕಂಪನಿಗಳು ಯಾವುವು? ಕಳಪೆ ಸಾಮಗ್ರಿಗಳ ಪ್ರಮಾಣ ಎಷ್ಟು? ಎಂದು ಸರ್ಕಾರಕ್ಕೆ ಕೇಳಿದ್ದಾರೆ.

ಕೊರೊನಾ ನಿಯಂತ್ರಣಕ್ಕಾಗಿ ಎಸ್‌ಡಿಆರ್‌ಎಫ್ ಮತ್ತು ಎನ್​ಡಿಆರ್​ಎಫ್ ಅನುದಾನದಲ್ಲಿ ಜಿಲ್ಲೆಗಳಿಗೆ ಹಂಚಿಕೆ ಮಾಡಿದ ಹಣ ಎಷ್ಟು? ಆ ಅನುದಾನದಲ್ಲಿ ಜಿಲ್ಲಾಡಳಿತಗಳು ಯಾವ ಉದ್ದೇಶಕ್ಕೆ ಎಷ್ಟು ಖರ್ಚು ಮಾಡಿದೆ? ಆಹಾರ, ಆಹಾರ ಧಾನ್ಯಗಳ ಕಿಟ್​ಗಳು, ಹಾಲು ಮುಂತಾದವುಗಳನ್ನು ಎಷ್ಟು ಪ್ರಮಾಣದಲ್ಲಿ ಸರ್ಕಾರ ವಿತರಿಸಿದೆ? ಪ್ರತಿ ಆಹಾರ ಪ್ಯಾಕೆಟ್/ ಆಹಾರ ಧಾನ್ಯಗಳ ಪ್ಯಾಕೇಟ್ ಕಿಟ್​​ಗೆ ನೀಡಿದ ಕನಿಷ್ಠ/ಗರಿಷ್ಠ ದರ ಎಷ್ಟು? ಆಹಾರ ತಯಾರಿಸಿದ ಸಂಸ್ಥೆಗಳು ಯಾವುವು? ಯಾವ ಸಂಸ್ಥೆಗಳಿಗೆ ಎಷ್ಟು ಹಣ ನೀಡಲಾಗಿದೆ? ರಾಜ್ಯದಲ್ಲಿ ಒಟ್ಟು ಎಷ್ಟು ಕ್ವಾರಂಟೈನ್ ಕೇಂದ್ರಗಳನ್ನು ನಿರ್ವಹಿಸಲಾಗುತ್ತಿದೆ? ಪ್ರತಿ ಕ್ವಾರಂಟೈನ್ ಕೇಂದ್ರಕ್ಕೆ ಇಲ್ಲಿಯವರೆಗೆ ಖರ್ಚು ಮಾಡಿದ ಹಣವೆಷ್ಟು? ಯಾವ ಬಾಬತ್ತಿಗೆ ಖರ್ಚು ಮಾಡಲಾಗಿದೆ? ಕ್ವಾರಂಟೈನ್​ಗೆ ಒಳಗಾದ ಪ್ರತಿ ವ್ಯಕ್ತಿಗೆ ತಗುಲಿರುವ ಖರ್ಚೆಷ್ಟು? ಎಂದು ಸಿಎಂಗೆ ಪ್ರಶ್ನೆ ಹಾಕಿದ್ದಾರೆ.

Last Updated : Jul 15, 2020, 7:01 AM IST

ABOUT THE AUTHOR

...view details