ಕರ್ನಾಟಕ

karnataka

ETV Bharat / state

ಸಚಿವ ಮಾಧುಸ್ವಾಮಿ ಕೂಡಲೇ ರೈತ ಮಹಿಳೆ ಕ್ಷಮೆಯಾಚಿಸಬೇಕು: ಸಿದ್ದರಾಮಯ್ಯ ಆಗ್ರಹ

ಅಗ್ರಹಾರ ಕೆರೆ ವೀಕ್ಷಣೆ ಮಾಡಲು ಬಂದಾಗ ಸಚಿವ ಮಾಧುಸ್ವಾಮಿ ರೈತ ಮಹಿಳೆಗೆ ನಿಂದಿಸಿದ್ದು ಈ ಕೂಡಲೇ ಕ್ಷಮೆಯಾಚಿಸಬೇಕು ಎಮದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮೂಲಕ ಆಗ್ರಹಿಸಿದ್ದಾರೆ.

EX CM Siddaramaiah
ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್

By

Published : May 20, 2020, 10:12 PM IST

ಬೆಂಗಳೂರು: ಅಹವಾಲು ಸಲ್ಲಿಸಲು ಬಂದಿದ್ದ ಮಹಿಳೆಯನ್ನು ಅವಮಾನಿಸಿರುವ ಸಚಿವ ಮಾಧುಸ್ವಾಮಿ ಕ್ಷಮೆಯಾಚಿಸಬೇಕು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸಚಿವ ಮಾಧುಸ್ವಾಮಿ (ಸಂಗ್ರಹ ಚಿತ್ರ)

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಅಹವಾಲು ಸಲ್ಲಿಸಲು ಬಂದಿದ್ದ ಅನ್ಯಾಯಕ್ಕೊಳಗಾಗಿರುವ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿಯವರ ದುರ್ವರ್ತನೆ ಅಕ್ಷಮ್ಯ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಕ್ಷಣ ಸಚಿವರು, ಆ ರೈತ ಮಹಿಳೆಯ ಕ್ಷಮೆ‌ ಯಾಚಿಸುವಂತೆ‌‌ ಮಾಡಿ, ಅವರನ್ನು‌ ಸಂಪುಟದಿಂದ ಕೈ ಬಿಟ್ಟು‌‌ ಸರ್ಕಾರದ ಮಾನ‌ ಉಳಿಸಬೇಕು ಎಂದು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಟ್ವೀಟ್

ಕೋಲಾರ ತಾಲೂಕಿನ ಎಸ್ ಅಗ್ರಹಾರ ಕೆರೆ ವೀಕ್ಷಣೆ ವೇಳೆ ಈ ಘಟನೆ ನಡೆದಿದ್ದು, ರೈತ ಮಹಿಳೆಗೆ ಕಾನೂನು ಸಂಸದೀಯ ಹಾಗೂ ಸಣ್ಣ ನೀರಾವರಿ ಸಚಿವ ಮಾಧುಸ್ವಾಮಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗುತ್ತಿದ್ದಂತೆ ವಿಧಾನಸಭೆ ಪ್ರತಿಪಕ್ಷದ ನಾಯಕರಾಗಿರುವ ಸಿದ್ದರಾಮಯ್ಯ ಇಂದು ಸಚಿವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ದನಿ ಎತ್ತಿದ್ದಾರೆ.

ABOUT THE AUTHOR

...view details