ಕರ್ನಾಟಕ

karnataka

ETV Bharat / state

ಇಂದಿನಿಂದ ಸಿದ್ದರಾಮಯ್ಯ ಬಾಗಲಕೋಟೆ ಪ್ರವಾಸ... ಸಾರ್ವಜನಕರಿಂದ ಅಹವಾಲು ಸ್ವೀಕಾರ - kannada newspaper, etv bharat, Ex CM, Siddaramiah, tour, Bagalkot, bengaluru, banglore, ಮಾಜಿ ಸಿಎಂ, ಸಿದ್ದರಾಮಯ್ಯ, ಬಾಗಲಕೋಟೆ ಪ್ರವಾಸ,

ಮಾಜಿ ಸಿಎಂ ಸಿದ್ದರಾಮಯ್ಯ ಇಂದಿನಿಂದ ನಾಲ್ಕು ದಿನ ಬಾಗಲಕೋಟೆ ಪ್ರವಾಸ ಕೈಗೊಳ್ಳಲಿದ್ದು, ಜಿಲ್ಲೆಯಾದ್ಯಂತ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ

By

Published : Jun 27, 2019, 4:42 AM IST

ಬೆಂಗಳೂರು:ಇಂದಿನಿಂದ (ಗುರುವಾರ)ದಿಂದ ನಾಲ್ಕು ದಿನ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆ ಪ್ರವಾಸ ಕೈಗೊಳ್ಳಲಿದ್ದಾರೆ.

ಜಿಲ್ಲೆಯ ಹಲವು ಭಾಗಗಳಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಇಂದು ಸ್ವಕ್ಷೇತ್ರ ಬಾದಾಮಿಯಲ್ಲಿ ಹಲವು ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಅಧಿಕಾರಿಗಳ ಜೊತೆ ಸರಣಿ ಸಭೆ ನಡೆಸಲಿರುವ ಅವರು, ತಾಲೂಕು ಮಟ್ಟದ ಪ್ರಗತಿ ಪರಿಶೀಲನೆ ಮಾಡಿ ಬಾದಾಮಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದಾರೆ.

ಇನ್ನೂ ಜೂ.29 ರಂದು ಜಿಲ್ಲೆ ಪ್ರಗತಿ ಪರಿಶೀಲನೆ ಸಭೆ ಹಾಗೂ ಬಾಗಲಕೋಟೆ ಜಿಲ್ಲಾ ಅಧಿಕಾರಿಗಳ ಜೊತೆ ಸಭೆ ನಡೆಸಲಿದ್ದಾರೆ. ಆಲಮಟ್ಟಿಯಲ್ಲಿ ಕಾಂಗ್ರೆಸ್ ಮುಖಂಡರ ಜೊತೆ ಸಭೆ ಹಾಗೂ ಗುಳೆದ ಗುಡ್ಡದಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಜೂ.30 ರಂದು ಬಾಗಲಕೋಟೆಯ ಕಾರ್ಯಕ್ರಮದಲ್ಲಿ ಭಾಗಿಯಾಗಿ ಸಂಜೆ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

For All Latest Updates

ABOUT THE AUTHOR

...view details