ಬೆಂಗಳೂರು: ಡಿ.ಜೆ.ಹಳ್ಳಿ ಹಾಗೂ ಕೆ.ಜಿ.ಹಳ್ಳಿ ಗಲಭೆ ಬೆನ್ನಲೇ ಅಭಿಪ್ರಾಯ ನೆಪದಲ್ಲಿ ಸಾಮಾಜಿಕ ಜಾಲತಾಣದಲ್ಲಿ ಅವಹೇಳಕಾರಿ ಪೋಸ್ಟ್ ಹಾಕುವವರ ಸಂಖ್ಯೆ ಹೆಚ್ಚಳವಾಗುತ್ತಿದೆ. ಪೋಸ್ಟ್ ವಿಚಾರವಾಗಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಆಡುಗೋಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಬೆಂಗಳೂರು ಗಲಭೆ: ಎಫ್ಬಿಯಲ್ಲಿ ಪೋಸ್ಟ್ ಹಾಕಿದವರ ವಿರುದ್ಧ ರಾಮಲಿಂಗಾರೆಡ್ಡಿ ದೂರು - ಎಫ್ಬಿಯಲ್ಲಿ ಪೋಸ್ಟ್
ಬೆಂಗಳೂರು ಗಲಭೆ ಸಂಬಂಧ ಫೇಸ್ಬುಕ್ನಲ್ಲಿ ಚೇತನ್ ಕುಮಾರ್ ಹಾಗೂ ಸಂತೋಷ್ ಎಂಬುವರ ತಮ್ಮ ವಿರುದ್ಧ ಪೋಸ್ಟ್ ಮಾಡಿದ ಹಿನ್ನೆಲೆ ರಾಮಲಿಂಗಾರೆಡ್ಡಿ ದೂರು ನೀಡಿದ್ದಾರೆ.
ರಾಮಲಿಂಗಾರೆಡ್ಡಿ
ಚೇತನ್ ಕುಮಾರ್ ಹಾಗೂ ಸಂತೋಷ್ ಎಂಬುವರ ವಿರುದ್ಧ ರಾಮಲಿಂಗಾರೆಡ್ಡಿ ದೂರು ನೀಡಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಚೇತನ್ ಬರೆದಿದ್ದಾನೆ ಎನ್ನಲಾದ ಫೇಸ್ಬುಕ್ ಪೋಸ್ಟ್ನಲ್ಲಿ ಗಲಭೆ ಸಂಬಂಧ ರಾಮಲಿಂಗಾರೆಡ್ಡಿ ವಿರುದ್ಧ ಬರೆಯಲಾಗಿದೆ ಎಂದು ತಿಳಿದುಬಂದಿದೆ. ಇದರಿಂದ ನನ್ನ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರು ನನ್ನನ್ನು ದಲಿತ ವಿರೋಧಿ ಎಂದು ಪರಿಗಣಿಸುವ ಸಾಧ್ಯತೆ ಇರಲಿದೆ. ಅಲ್ಲದೆ ಸಾರ್ವಜನಿಕವಾಗಿ ಅಶಾಂತಿ ಸೃಷ್ಟಿಸಲು ಕಾರಣವಾಗಲಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.