ಬೆಂಗಳೂರು: ಬಿಎಸ್ವೈ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ಸುರೇಶ್ ಕುಮಾರ್ ಅವರಿಗೆ ಈ ಬಾರಿ ಕೊಕ್ ನೀಡಲಾಗಿದೆ. ಸಚಿವ ಸ್ಥಾನ ಕೈ ತಪ್ಪಿ ಹೋಗಿದ್ದು, ಕಳೆದ ಎರಡು ವರ್ಷದ ಅವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು ಎಂದು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕಳೆದ 2 ವರ್ಷದ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದ: ಸುರೇಶ್ ಕುಮಾರ್ - cabinet expansion news
ಯಡಿಯೂರಪ್ಪ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಸಚಿವರಾಗಿ ಕಾರ್ಯನಿರ್ವಹಿಸಿದ ಸುರೇಶ್ ಕುಮಾರ್ ಅವರಿಗೆ ನೂತನ ಸಂಪುಟದಲ್ಲಿ ಸಚಿವ ಸ್ಥಾನ ಕೈ ತಪ್ಪಿದೆ. ಕಳೆದ 2 ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ಧನ್ಯವಾದಗಳನ್ನು ಅವರು ತಿಳಿಸಿದ್ದಾರೆ.
ನೂತನ 29 ಸಚಿವರು ಇಂದು ರಾಜಭವನದಲ್ಲಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಯಡಿಯೂರಪ್ಪ ಸಂಪುಟದಲ್ಲಿದ್ದ ಬಹುತೇಕ ಸಚಿವರನ್ನು ಕೈ ಬಿಟ್ಟಿದ್ದು, ಅದರಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ ಸಚಿವರಾಗಿದ್ದ ಸುರೇಶ್ ಕುಮಾರ್ ಅವರನ್ನು ಸಹ ಸಚಿವ ಸ್ಥಾನದಿಂದ ಕೈ ಬಿಡಲಾಗಿದೆ.
ಈ ಕುರಿತು ಟ್ವೀಟ್ ಮೂಲಕ 'ಕಳೆದ ಎರಡು ವರ್ಷಗಳ ಅವಧಿಯಲ್ಲಿ ಸಹಕರಿಸಿದ ಎಲ್ಲರಿಗೂ ನನ್ನ ಹೃತ್ಪೂರ್ವಕ ಧನ್ಯವಾದಗಳು' ಎಂದು ತಿಳಿಸಿದ್ದಾರೆ. ಮಾಜಿ ಸಚಿವರ ಟ್ವೀಟ್ಗೆ ಸಾರ್ವಜನಿಕರಿಂದ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಲವರು ಸುರೇಶ್ ಕುಮಾರ್ ಕೆಲಸಕ್ಕೆ ಶ್ಲಾಘನೆಗೆ ವ್ಯಕ್ತಪಡಿಸಿದ್ದಾರೆ. ಇನ್ನೂ ಕೆಲವರು ಶಿಕ್ಷಕರ ನೇಮಕ, ಶುಲ್ಕ ವಿಚಾರ, ಶಾಲಾರಂಭದ ಕುರಿತು ಟ್ವೀಟ್ ಮಾಡಿದ್ದಾರೆ.