ಬೆಂಗಳೂರು :ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೋವಿಡ್ನಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದ ಸುದ್ದಿ ಕೇಳಿ ಸಂತೋಷವಾಯಿತು. ಮುಖ್ಯಮಂತ್ರಿಗಳು ಎಂದಿನಂತೆ ಕಾರ್ಯಪ್ರವೃತ್ತರಾಗಲಿ ಎಂದು ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡರು ಆಶಿಸಿದ್ದಾರೆ.
ಕೋವಿಡ್ನಿಂದ ಸಂಪೂರ್ಣ ಗುಣಮುಖರಾದ ಸಿಎಂಗೆ ಶುಭ ಹಾರೈಸಿದ ಮಾಜಿ ಪ್ರಧಾನಿ - CM latest news
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಕೊರೊನಾ ಕಂಟಕದಿಂದ ಸಂಪೂರ್ಣ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಕ್ಕೆ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡರು ಹರ್ಷ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭಾ ಸದಸ್ಯ ಹೆಚ್.ಡಿ. ದೇವೇಗೌಡ
ಕೊರೊನಾ ಕಂಟಕದಿಂದ ಪಾರುಮಾಡಿದ ಆಸ್ಪತ್ರೆ ಸಿಬ್ಬಂದಿಗೆ ಕೃತಜ್ಞತೆ ಸಲ್ಲಿಸಿದ ಬಿಎಸ್ವೈ..!
ರಾಜ್ಯದಲ್ಲಿ ಕೋವಿಡ್ ಮತ್ತು ಅತಿವೃಷ್ಠಿ ಎರಡನ್ನು ನಾವೆಲ್ಲ ಎದುರಿಸಬೇಕಾಗಿದೆ. ಇದರ ಬಗ್ಗೆ ಹೆಚ್ಚಿನ ಗಮನಹರಿಸಲಿ ಎಂದು ಪತ್ರಿಕಾ ಹೇಳಿಕೆ ತಿಳಿಸಿದ್ದಾರೆ. ರಾಜ್ಯ ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಮ್ಮ ಸಂಪೂರ್ಣ ಬೆಂಬಲವಿದೆ. ಜೊತೆಗೆ ಭೂ ಕಾಯ್ದೆ, ಎಪಿಎಂಸಿ ಕಾಯ್ದೆ ಮತ್ತು ಕೈಗಾರಿಕಾ ನೀತಿ ತಿದ್ದುಪಡಿಗಳನ್ನು ಮರು ಪರಿಶೀಲಿಸಲಿ ಎಂದು ಮಾಧ್ಯಮಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.