ಬೆಂಗಳೂರು :ನಾಳೆ ರಾಜ್ಯಾದ್ಯಂತ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ) ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ಧತೆಗಳು ನಡೆದಿವೆ. ನಗರದ ಮಲ್ಲೇಶ್ವರಂ ಸರ್ಕಾರಿ ಪ್ರೌಢಶಾಲೆಯಲ್ಲಿ ಟಿಇಟಿ ಪರೀಕ್ಷಾ ಕೇಂದ್ರವನ್ನು ಸ್ಯಾನಿಟೈಸ್ ಮಾಡಲಾಗಿದೆ. ಈಗಾಗಲೇ ಪರೀಕ್ಷಾ ಸಿದ್ಧತಾ ಕಾರ್ಯದಲ್ಲಿ ಭಾಗಿಯಾಗುವ ಸಿಬ್ಬಂದಿಗೆ ಕೊನೆ ಹಂತದ ಸಲಹೆ, ಸೂಚನೆಗಳನ್ನು ನೀಡಲಾಗಿದೆ.
ನಾಳೆ ಬೆಳಗ್ಗೆ 9 ಗಂಡೆಗೆ ಒಂದು ಪತ್ರಿಕೆ ಹಾಗೂ ಮಧ್ಯಾಹ್ನ 1-30ಕ್ಕೆ ಎರಡನೇ ಪತ್ರಿಕೆಯ ಪರೀಕ್ಷೆ ಇರಲಿದೆ. ಈ ಎರಡು ಸೆಕ್ಷನ್ಗಳ ನಡುವಿನ ಅವಧಿಯಲ್ಲೂ ಅಭ್ಯರ್ಥಿಗಳು ಕುಳಿತುಕೊಳ್ಳುವ ಡೆಸ್ಕ್ಗಳನ್ನು ಸ್ಯಾನಿಟೈಸ್ ಮಾಡಲಾಗುತ್ತಿದೆ. ಕೊರೊನಾ ಲಕ್ಷಣ ಕಂಡು ಬಂದರೆ ಅವರಿಗಾಗಿ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ.