ಬೆಂಗಳೂರು :ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಅಧಿಕ ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸುವ ಹಿನ್ನೆಲೆಯಲ್ಲಿ ಬೆಂಗಳೂರು ನಗರಾದ್ಯಂತ ಇಂದಿನಿಂದ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಅವರು, ನಟ ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನಕ್ಕೆ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ಅಪಾರ ಸಂಖ್ಯೆಯ ಅಭಿಮಾನಿಗಳು ಆಗಮಿಸುತ್ತಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ಜರುಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ನಗರದಲ್ಲಿ ಇಂದಿನಿಂದ ಅ.31 ಮಧ್ಯರಾತ್ರಿ 12 ಗಂಟೆವರೆಗೆ ನಗರ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ಒಳಪಡುವ ಎಲ್ಲ ಬಾರ್ ಅಂಡ್ ರೆಸ್ಟೋರೆಂಟ್ಗಳಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ ಎಂದಿದ್ದಾರೆ.